ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಹದಾರ್ಢ್ಯ ಸ್ಪರ್ಧೆ: ಕೃಷ್ಣಗೆ ಚಿನ್ನದ ಪದಕ

Last Updated 9 ಫೆಬ್ರುವರಿ 2011, 18:30 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಧಾರವಾಡ ಜಿಲ್ಲಾ ದೇಹದಾರ್ಢ್ಯ ಸಂಸ್ಥೆಯ ಕೃಷ್ಣ ಚಿಕ್ಕತುಂಬಳ ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಡೆದ 48ನೇ ರಾಷ್ಟ್ರೀಯ ಕಿರಿಯರ ದೇಹದಾರ್ಢ್ಯ ಚಾಂಪಿಯನ್‌ಷಿಪ್‌ನ 75 ಕೆ.ಜಿ. ಮೇಲ್ಪಟ್ಟವರ ವಿಭಾಗದಲ್ಲಿ ಚಿನ್ನ ಗೆದ್ದುಕೊಂಡಿದ್ದಾರೆ.

ವಿಕಲಾಂಗರ ರಾಷ್ಟ್ರೀಯ ದೇಹದಾರ್ಢ್ಯ ಚಾಂಪಿಯನ್‌ಷಿಪ್‌ನಲ್ಲಿ ಸಂಸ್ಥೆಯ ಕಾಸಿಮ್‌ಸಾಬ್ ರಾಯಚೂರು 55 ಕೆಜಿ ಒಳಗಿನವರ ವಿಭಾಗದಲ್ಲಿ ಮೂರನೇ ಸ್ಥಾನ ಗಳಿಸಿದರೆ, ಮಹಮ್ಮದ್ ಗೌಸ್ ಕಳಸಾಪುರ ನಾಲ್ಕನೇ ಸ್ಥಾನ ಪಡೆದಿದ್ದಾರೆ.

50 ವರ್ಷ ಮೇಲ್ಪಟ್ಟ (70 ಕೆಜಿಗಿಂತ ಅಧಿಕ ಭಾರ) ಹಿರಿಯರ ಚಾಂಪಿಯನ್‌ಷಿಪ್‌ನಲ್ಲಿ ಶಂಕರ ಪಿಳ್ಳೈ ನಾಲ್ಕನೇ ಸ್ಥಾನ ಗಳಿಸಿದ್ದಾರೆ. ಹಿರಿಯರ ವಿಭಾಗದಲ್ಲಿ ರವಿಕುಮಾರ ಎರಡನೇ ಸ್ಥಾನ, ಸಿ.ಎ. ಜಯಣ್ಣ ನಾಲ್ಕನೇ ಸ್ಥಾನ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT