ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೈಹಿಕ ಸದೃಢತೆಗೆ ಕ್ರೀಡೆಗಳಲ್ಲಿ ಭಾಗವಹಿಸಬೇಕು

Last Updated 3 ಅಕ್ಟೋಬರ್ 2012, 19:05 IST
ಅಕ್ಷರ ಗಾತ್ರ

ಹೊಸಕೋಟೆ: `ವಿದ್ಯಾರ್ಥಿಗಳು ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಲು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು~ ಎಂದು ಕಾರ್ಮಿಕ ಬಿ.ಎನ್. ಬಚ್ಚೇಗೌಡ ಸಲಹೆ ನೀಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯು ಹೊಸಕೋಟೆಯ ಚನ್ನಬೈರೇಗೌಡ ಕ್ರೀಡಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಬೆಂಗಳೂರು ವಿಭಾಗ ಮಟ್ಟದ ಹಾಕಿ ಪಂದ್ಯಾಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

`ರಾಜ್ಯ ಸರ್ಕಾರ ಕ್ರೀಡೆಗೆ ಅಧಿಕ ಪ್ರೋತ್ಸಾಹ ನೀಡಿದ್ದು ವಿದ್ಯಾರ್ಥಿಗಳು ಅದರ ಸದುಪಯೋಗ ಪಡೆದುಕೊಳ್ಳಬೇಕು. ಇತ್ತೀಚೆಗೆ ಭಾರತ ಅಂತರರಾಷ್ಟ್ರೀಯ ಮಟ್ಟದಲ್ಲಿ  ಕ್ರೀಡೆಗಳಲ್ಲಿ ತನ್ನದೇ ಛಾಪು ಮೂಡಿಸುತ್ತಿದೆ. ಹಾಗಾಗಿ ಯುವ ಜನತೆ ಹೆಚ್ಚಾಗಿ ಕ್ರೀಡೆಗಳಲ್ಲಿ ಭಾಗವಹಿಸುವುದರ ಮೂಲಕ ಕ್ರೀಡಾ ಮನೊಭಾವವನ್ನು ಬೆಳೆಸಿಕೊಳ್ಳಬೇಕು~ ಎಂದು ಅವರು ಎಂದರು.

ತಾಲೂಕು ಪಂಚಾಯಿತಿ ಅಧ್ಯಕ್ಷ ಟಿ.ಎಸ್.ರಾಜಶೇಖರ್ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ.ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷ ವಿ.ನಾರಾಯಣಸ್ವಾಮಿ ಕ್ರೀಡಾ ಜ್ಯೋತಿ ಸ್ವೀಕರಿಸಿದರು. ಉಪನಿರ್ದೇಶಕ ಎಚ್.ವಿ.ವೆಂಕಟೇಶಪ್ಪ,  ಎಪಿಎಂಸಿ ಅಧ್ಯಕ್ಷ ಸಿ.ಮುನಿಯಪ್ಪ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸಿ.ಜಯರಾಜ್ ಉಪಸ್ಥಿತರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT