ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡ ಬಸವೇಶ್ವರ ರಥೋತ್ಸವ

Last Updated 19 ಮಾರ್ಚ್ 2011, 19:30 IST
ಅಕ್ಷರ ಗಾತ್ರ

ಕುರುಗೋಡು: ಇತಿಹಾಸ ಪ್ರಸಿದ್ಧ ದೊಡ್ಡ ಬಸವೇಶ್ವರ ಸ್ವಾಮಿ ಮಹಾ ರಥೋತ್ಸವ ಶನಿವಾರ ಸಂಜೆ ಸಡಗರ ಸಂಭ್ರಮದಿಂದ ಜರುಗಿತು. ಇದರ ಅಂಗವಾಗಿ ಬೆಳಿಗ್ಗೆಯಿಂದಲೇ ದೇವಸ್ಥಾನದಲ್ಲಿ ವಿಶೇಷ ಪೂಜೆ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು.

ಸಹಸ್ರಾರು ಭಕ್ತರು ಸಾಲಿನಲ್ಲಿ ನಿಂತು ದೊಡ್ಡಬಸವೇಶ್ವರ ಸ್ವಾಮಿ ಸಮೀಪ ದರ್ಶನ ಪಡೆದರು.

ಸಂಜೆ 5-30ಕ್ಕೆ ಸುಮಾರು 60 ಅಡಿ ಎತ್ತರದ ಬಣ್ಣದ ಹೂಗಳು ಮತ್ತು ಇತರೆ ಅಲಂಕಾರಿಕ ವಸ್ತುಗಳು ಮತ್ತು ಗೊಂಬೆಗಳಿಂದ ಅಲಂಕೃತಗೊಂಡಿದ್ದ ರಥವನ್ನು ಒಂದು ಕಿ.ಮೀ. ದೂರದ ಎದುರುಬಸವಣ್ಣ ದೇವಸ್ಥಾನದವರೆಗೆ ಎಳೆದೊಯ್ದು ಭಕ್ತರು ಪುನಃ ಸ್ವಸ್ಥಳಕ್ಕೆ ಎಳೆದುತಂದರು.

ರಥೋತ್ಸವದಲ್ಲಿ ಪಾಲ್ಗೊಂಡಿದ್ದ ಸಹಸ್ರಾರು ಭಕ್ತರು ರಥಕ್ಕೆ ಹೂ ಹಣ್ಣು ಎಸೆದು ಹರಕೆ ತೀರಿಸಿದರು.

ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಮಾತ್ರವಲ್ಲದೆ ನೆರೆಯ ರಾಯಚೂರು, ಕೊಪ್ಪಳ, ಚಿತ್ರದುರ್ಗ, ದಾವಣಗೆರೆ ಜಿಲ್ಲೆ ಮತ್ತು ಆಂಧ್ರಪ್ರದೇಶದ ಕೆಲವು ಊರುಗಳಿಂದ ಆಗಮಿಸಿದ್ದ ಹೆಚ್ಚಿನ ಸಂಖ್ಯೆಯ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು.

ಈ ವರ್ಷ ಮಳೆ ಬೆಳೆ ಉತ್ತಮವಾಗಿರುವುದರಿಂದ ರೈತರು ಬೆಳೆದ ಬೆಳೆ ಮಾರಾಟ ಮಾಡಿದ ಹಣ ಜಾತ್ರೆ ಸಮಯಕ್ಕೆ ಕೈಸೇರಿರುದರಿಂದ ಕಳೆದ ವರ್ಷಕ್ಕಿಂತ ಈ ವರ್ಷ ಜಾತ್ರೆಯಲ್ಲಿ ಹೆಚ್ಚಿನ ಸಂಖ್ಯೆ ಜನರು ಉತ್ಸಾಹದಿಂದ ಭಾಗವಹಿಸಿದ್ದು ವಿಶೇಷವಾಗಿತ್ತು.

ಇಲ್ಲಿನ ಸುಂಕಲಮ್ಮದೇವಿ ದೇವಸ್ಥಾನ, ಕಲ್ಲುಗುಡೇಶ್ವರ ದೇವಸ್ಥಾನ, ರಾಘವಾಂಕಸ್ವಾಮಿ ಮಠ, ಕೋಟೆ ಆಂಜನೇಯಸ್ವಾಮಿ ದೇವಸ್ಥಾನ, ಬಾದನಹಟ್ಟಿ ಚಿತ್ರಯ್ಯನಗುಡಿ, ಬೈಲೂರು ರಸ್ತೆಯ ಗೂಳಪ್ಪ ತಾತನವರ ಮಠದಲ್ಲಿ ಉಚಿತ ಊಟದ ವ್ಯವಸ್ಥೆ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT