ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡಬಳ್ಳಾಪುರ: ಬರ ಪೀಡಿತವೆಂದು ಘೋಷಿಸಲು ಆಗ್ರಹ

Last Updated 9 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: `ಮಳೆ ಆಧಾರಿತ ಕೃಷಿಯೇ ಹೆಚ್ಚಾಗಿರುವ ತಾಲ್ಲೂಕಿನಲ್ಲಿ ಮಳೆ ಇಲ್ಲದೆ ರೈತರು ಕಂಗಾಲಾಗಿದ್ದಾರೆ ಎಂದು ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಎಚ್.ಅಪ್ಪಯ್ಯಣ್ಣ ಆತಂಕ ವ್ಯಕ್ತಪಡಿಸಿದ್ದಾರೆ.

 ಭಾನುವಾರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, `ಕೂಡಲೇ ಸರ್ಕಾರವು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡುವ ಮೂಲಕ ರೈತರ ನೆರವಿಗೆ ಮುಂದಾಗಬೇಕು~ ಎಂದು ಆಗ್ರಹಿಸಿದ್ದಾರೆ.

`ಕೃಷಿ ಇಲಾಖೆ ಸರ್ಕಾರಕ್ಕೆ ಸೂಕ್ತ ಮಾಹಿತಿ ನೀಡದೆ ಹಾಗೂ ಕ್ಷೇತ್ರದ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು ಸರ್ಕಾರದ ಮೇಲೆ ಒತ್ತಡ ತರುವ ಮೂಲಕ ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಿಸುವಲ್ಲಿ ವಿಫಲರಾಗಿದ್ದಾರೆ.

 ಈ ನಿಟ್ಟಿನಲ್ಲಿ ಸರ್ಕಾರ ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲು ಆಗ್ರಹಿಸಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಜೆಡಿಎಸ್ ಪಕ್ಷದ ನಿಯೋಗ ಮನವಿ ಸಲ್ಲಿಸಲಿದೆ~ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT