ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೌರ್ಜನ್ಯ ತಡೆಗೆ ಸಂಘಟಿತರಾಗಿ: ಮಹಿಳೆಯರಿಗೆ ಕಿವಿಮಾತು

Last Updated 1 ಏಪ್ರಿಲ್ 2013, 19:57 IST
ಅಕ್ಷರ ಗಾತ್ರ

ಕೃಷ್ಣರಾಜಪುರ: `ಪ್ರಮುಖ ಕ್ಷೇತ್ರಗಳಲ್ಲಿ ಮಹಿಳೆಯರ ಮೇಲಿನ ಶೋಷಣೆ ಮುಂದುವರೆದಿದೆ. ಒಂಟಿ ಮಹಿಳೆಯರ ಮೇಲೆ ದೌರ್ಜನ್ಯ ಸಮಾಜವನ್ನು ತಲ್ಲಣಗೊಳಿಸಿದೆ. ಇದನ್ನು ಪರಿಣಾಮಕಾರಿಯಾಗಿ ಎದುರಿಸಲು ಮಹಿಳೆಯರು ಸಂಘಟಿತರಾಗಬೇಕು' ಎಂದು ಸಿಪಿಐ(ಎಂ) ನಗರ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಗೋಪಾಲಗೌಡ ಅಭಿಪ್ರಾಯಪಟ್ಟರು.

`ಜನವಾದಿ ಮಹಿಳಾ ಸಂಘಟನೆ'ಯು ಮಹಿಳಾ ದಿನಾಚರಣೆ ಅಂಗವಾಗಿ ಬಿಬಿಎಂಪಿ ಕಚೇರಿ ಎದುರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಹಿಂಜರಿಕೆ ಸ್ವಭಾವದವರು ಅಧಿಕ ಸಂಖ್ಯೆಯಲ್ಲಿದ್ದು ತಮ್ಮ ಹಕ್ಕು ಪ್ರತಿಪಾದಿಸುವ ನಿಟ್ಟಿನಲ್ಲಿ ಪ್ರಯತ್ನಿಸುತ್ತಿಲ್ಲ. ಆತ್ಮವಿಶ್ವಾಸದಿಂದ ಬದುಕು ಕಟ್ಟಿಕೊಳ್ಳಲು ಮಹಿಳಾ ಸಂಘಟನೆಗಳ ಮಾರ್ಗದರ್ಶನ ಪಡೆಯಬೇಕು ಎಂದರು.

ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಘಟಕದ ಮುಖಂಡರಾದ ಗೌರಮ್ಮ ಮಾತನಾಡಿ, ಮಹಿಳೆಯರ ನ್ಯಾಯಯುತವಾದ ಬೇಡಿಕೆಗಳಿಗೆ ಸಂಘಟನೆ ಹೋರಾಟ ನಡೆಸುತ್ತಾ ಬಂದಿದೆ. ತ್ಯಾಗ, ಬಲಿದಾನಗಳ ಮೂಲಕ ದತ್ತವಾದ ಹಕ್ಕನ್ನು ಒಗ್ಗೂ2ಡುವಿಕೆ, ಹೋರಾಟಗಳಿಂದ ಮಾತ್ರ ಪಡೆಯಲು ಸಾಧ್ಯ ಎಂದರು.

ಕಾರ್ಯದರ್ಶಿ ಕೆ.ಎಸ್.ಲಕ್ಷ್ಮೀ, `ಕುಟುಂಬದ ಆರೋಗ್ಯಕರ ಬೆಳವಣಿಗೆಯಲ್ಲಿ ಮಹಿಳೆಯರ ಪಾತ್ರ ಅನನ್ಯ. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರಿಗೆ ನಿರೀಕ್ಷಿಸಿದಷ್ಟು ಸ್ಥಾನಮಾನಗಳು ಸಿಗುತ್ತಿಲ್ಲ. ಮಹಿಳೆಯರು ಶಿಕ್ಷಣ ಪಡೆದು ಇತರರಿಗೆ ಮಾರ್ಗದರ್ಶನ ನೀಡಬೇಕು' ಎಂದರು.

ಸಾಮಾಜಿಕ ಕಾರ್ಯಕರ್ತರಾದ ಟಿ.ಆರ್.ಬಾನು, ರಮೇಶ್, ನಂಜೇಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT