ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೌರ್ಜನ್ಯಮುಕ್ತ ಸಮಾಜ ನಿರ್ಮಾಣಕ್ಕೆ ಒತ್ತಾಯ

Last Updated 4 ಆಗಸ್ಟ್ 2013, 19:59 IST
ಅಕ್ಷರ ಗಾತ್ರ

ಕೃಷ್ಣರಾಜಪುರ: `ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ದಬ್ಬಾಳಿಕೆ, ಕಿರುಕುಳಗಳಿಗೆ ಸರ್ಕಾರ ಕಡಿವಾಣ ಹಾಕಿ, ದೌರ್ಜನ್ಯಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು' ಎಂದು ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷೆ ಗೌರಮ್ಮ ಒತ್ತಾಯಿಸಿದರು.

ಉದಯನಗರ ಸೂರಿ ಭವನದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಪೂರ್ವ ವಲಯದ ಐದನೇ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

`ಹಿಂದಿನ ಸರ್ಕಾರ ಅಭಿವೃದ್ಧಿ ಮಂತ್ರ ಪಠಿಸುತ್ತ ಕಾಲ ಕಳೆದರೆ ಈಗಿನ ಸರ್ಕಾರ ಸಾಮಾಜಿಕ ನ್ಯಾಯ ಮಂತ್ರ ಜಪಿಸುತ್ತಿದೆ. ಸಾಮಾಜಿಕ ನ್ಯಾಯದಡಿ ಇಲ್ಲದವರಿಗೆ ಬದುಕು ನೀಡುವುದು ಸರ್ಕಾರದ ಕರ್ತವ್ಯ. ಮಹಿಳೆಯರ ಹಕ್ಕುಗಳಿಗಾಗಿ ಮುಂದಿನ ದಿನಗಳಲ್ಲಿ ಸರ್ಕಾರದ ಕಣ್ತೆರೆಸಲು ಚಳವಳಿ ಹಮ್ಮಿಕೊಳ್ಳ ಲಾಗುವುದು' ಎಂದರು.

`ಡಿ.ಜೆ.ಹಳ್ಳಿಯಲ್ಲಿ ಮೇಘಲಾ ಎಂಬ ಬಾಲಕಿ ಅಪೌಷ್ಟಿಕತೆಯಿಂದ ಮೃತಪಟ್ಟ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇಲಾಖೆ ಅಧಿಕಾರಿಗಳು ಬೇಜವಾಬ್ದಾರಿಯಿಂದ ಹೇಳಿಕೆ ನೀಡಿರುವುದು ಸರಿಯಲ್ಲ. ಘಟನೆ ಯಾವುದೇ ಒಂದು ಇಲಾಖೆಗೆ ಸಂಬಂಧಿಸಿದ್ದಲ್ಲ. ಬದಲಿಗೆ ಸರ್ಕಾರ ಹೊಣೆ ಅರಿತು ಕೆಲಸ ಮಾಡಬೇಕು' ಎಂದು ಅವರು ಸಲಹೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT