ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ಯಾಮೇನಹಳ್ಳಿ: ಶೇ. 72 ಮತದಾನ

Last Updated 26 ಸೆಪ್ಟೆಂಬರ್ 2011, 10:55 IST
ಅಕ್ಷರ ಗಾತ್ರ

ದಾವಣಗೆರೆ: ತಾಲ್ಲೂಕಿನ ದ್ಯಾಮೇನಹಳ್ಳಿ ಗ್ರಾಮ ಪಂಚಾಯ್ತಿಯ ಒಂದು ಸ್ಥಾನಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ ಶೇ. 72 ಮತದಾನವಾಗಿದೆ.

575 ಮತದಾರರಲ್ಲಿ 417 ಮಂದಿ ಮತ ಚಲಾಯಿಸಿದರು. ಚುನಾವಣಾ ಪ್ರಕ್ರಿಯೆ ಸಂಪೂರ್ಣ ಶಾಂತಿಯುತವಾಗಿತ್ತು.

ಹೆದ್ನೆ ಗ್ರಾಮ ಪಂಚಾಯ್ತಿ ಒಂದು ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿತ್ತು. ಆದರೆ, ಅಲ್ಲಿ ಅವಿರೋಧ ಆಯ್ಕೆ ನಡೆದ ಕಾರಣ ಭಾನುವಾರ ದ್ಯಾಮೇನಹಳ್ಳಿಯಲ್ಲಿ ಮಾತ್ರ ಚುನಾವಣೆ ನಡೆಯಿತು ಎಂದು ತಹಶೀಲ್ದಾರ್ ಡಾ.ಬಿ.ಆರ್. ಹರೀಶ್ ತಿಳಿಸಿದ್ದಾರೆ.

ಹರಪನಹಳ್ಳಿ: ಶೇ. 84ರಷ್ಟು ಮತದಾನ
ಹರಪನಹಳ್ಳಿ:
ತಾಲ್ಲೂಕಿನ ಎರಡು ಗ್ರಾ.ಪಂ.ಗಳ ತಲಾ ಒಂದೊಂದು ಸ್ಥಾನಗಳಿಗೆ ಭಾನುವಾರ ನಡೆದ ಉಪಚುನಾವಣೆ ಪ್ರಕ್ರಿಯೆ ಶಾಂತಿಯುತವಾಗಿ ನಡೆದಿದೆ ಎಂದು ತಹಶೀಲ್ದಾರ್ ಡಾ.ವಿ. ವೆಂಕಟೇಶಮೂರ್ತಿ ತಿಳಿಸಿದ್ದಾರೆ.

ನೀಲಗುಂದ ಹಾಗೂ ಮೈದೂರು ಗ್ರಾ.ಪಂ.ಯ ತಲಾ ಒಬ್ಬರು ಸದಸ್ಯರ ಅಕಾಲಿಕ ಮರಣದಿಂದ ತೆರವಾದ ಸ್ಥಾನಗಳಿಗೆ ಈ ಚುನಾವಣೆ ನಡೆದಿದೆ. ನೀಲಗುಂದ ಪಂಚಾಯತ್ ವ್ಯಾಪ್ತಿಯ ಭೈರಾಪುರ ಪರಿಶಿಷ್ಟ ಕ್ಷೇತ್ರದಲ್ಲಿ ಆಯ್ಕೆಯಾಗಿದ್ದ ಸದಸ್ಯರೊಬ್ಬರು, ತಾ.ಪಂ.ಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದೆ.

ಸಾಮಾನ್ಯ `ಅ~ವರ್ಗಕ್ಕೆ ಮೀಸಲಿರಿಸಿದ ನೀಲಗುಂದ ಕ್ಷೇತ್ರದಲ್ಲಿ ನಡೆದ ಚುನಾವಣೆಯಲ್ಲಿ 286ಪುರುಷರು ಹಾಗೂ  237ಮಹಿಳಾ ಮತದಾರರು ಸೇರಿದಂತೆ ಒಟ್ಟು 523ಮತದಾರರು ತಮ್ಮ ಹಕ್ಕು ಚಲಾಯಿಸಿದ್ದು, ಕ್ಷೇತ್ರದಲ್ಲಿ ಸರಾಸರಿ ಶೇ. 81.82ರಷ್ಟು ಮತದಾನ ನಡೆದಿದೆ.

ಸಾಮಾನ್ಯ ವರ್ಗಕ್ಕೆ ಮೀಸಲಿರಿಸಿದ ಮೈದೂರು ಗ್ರಾ.ಪಂ. ವ್ಯಾಪ್ತಿಯ ಮೈದೂರು ಕ್ಷೇತ್ರದಲ್ಲಿ ನಡೆದ ಚುನಾವಣೆಯಲ್ಲಿ 567ಪುರುಷರು ಹಾಗೂ 519ಮಹಿಳಾ ಮತದಾರರು ಸೇರಿದಂತೆ ಒಟ್ಟು 1,086 ಮತದಾರರು ಚುನಾವಣೆಯಲ್ಲಿ ಹಕ್ಕು ಚಲಾಯಿಸಿದರು. ಕ್ಷೇತ್ರ ಸರಾಸರಿ ಶೇ. 83.02ರಷ್ಟು ಮತದಾನ ನಡೆದಿದೆ.

ಬೆಳಿಗ್ಗೆ 7ರಿಂದ ಸಂಜೆ 5ವರೆಗೂ ನಡೆದ ಮತದಾನ ಪ್ರಕ್ರಿಯೆ ಆರಂಭದಲ್ಲಿ ಸ್ವಲ್ಪ ನಿಧನಗತಿಯಲ್ಲಿ ಸಾಗಿದರೂ, ಮಧ್ಯಾಹ್ನದ ವೇಳೆಗೆ ಮತದಾನ ಪ್ರಕ್ರಿಯೆ ಚುರುಕಾಯಿತು.

ಎರಡು ಸ್ಥಾನಗಳ ಚುನಾವಣೆಯ ಮತಪೆಟ್ಟಿಗೆಗಳನ್ನು ಉಪ ಖಜಾನೆಯಲ್ಲಿ ಭದ್ರತಾ ಕೊಠಡಿಯಲ್ಲಿ ಇರಿಸಲಾಗಿದೆ. ಇದೇ 29ರಂದು ಗುರುವಾರ ಬೆಳಿಗ್ಗೆ 8ರಿಂದ ಮಿನಿ ವಿಧಾನಸಭಾ ಸಭಾಂಗಣದಲ್ಲಿ ಮತಗಳ ಎಣಿಕೆ ಕಾರ್ಯ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT