ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧರಣಿ ಹಿಂಪಡೆದ ಅಕ್ಷರ ದಾಸೋಹ ನೌಕರರು

Last Updated 6 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕನಿಷ್ಠ ವೇತನ ನೀಡುವಂತೆ ಆಗ್ರಹಿಸಿ ರಾಜ್ಯ ಅಕ್ಷರ ದಾಸೋಹ ನೌಕರರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಐದು ದಿನಗಳಿಂದ ನಡೆಸುತ್ತಿದ್ದ ಧರಣಿಯನ್ನು ಶುಕ್ರವಾರ ಹಿಂಪಡೆದಿದ್ದಾರೆ.

‘ಅಕ್ಷರ ದಾಸೋಹ ನೌಕರರಿಗೆ ಸರ್ಕಾರ ಹೆಚ್ಚುವರಿ ₨ 500 ನೀಡಲು ನಿರ್ಧರಿಸಿದೆ. ಧರಣಿ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿದ ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಅವರು ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿ­ದ್ದಾರೆ. ಧರಣಿಯನ್ನು ತಾತ್ಕಾಲಿಕವಾಗಿ ಹಿಂಪಡೆ­ಯಲಾಗಿದೆ’ ಎಂದು ಸಂಘದ ಅಧ್ಯಕ್ಷೆ ಎಸ್.ವರಲಕ್ಷ್ಮೀ ತಿಳಿಸಿದ್ದಾರೆ.

ಕನಿಷ್ಠ ಮೂರು ಸಾವಿರ ವೇತನ ನಿಗದಿಪಡಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಆದರೆ, ಈಗ ಹೆಚ್ಚುವರಿಯಾಗಿ ಕೇವಲ ₨ 500 ಮಾತ್ರ ನೀಡುವುದಾಗಿ ಹೇಳಿದೆ. ಇದರಿಂದ ಸಂತಸ ಇಲ್ಲದಿದ್ದರೂ ನಮ್ಮ ಹೋರಾಟಕ್ಕೆ ಸಣ್ಣ ಜಯ ಸಿಕ್ಕಂತಾಗಿದೆ.

ಅಲ್ಲದೇ, ಜನವರಿ ತಿಂಗಳಲ್ಲಿ ಮುಖ್ಯಮಂತ್ರಿಗಳು ಜಂಟಿ ಸಭೆ ನಡೆಸಿ ಸಮಸ್ಯೆಗಳನ್ನು ಆಲಿಸುವುದಾಗಿ ಮತ್ತು ಬಜೆಟ್‌ನಲ್ಲಿ ವಿಶೇಷ ಅನುದಾನ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಆ ನಂತರವೂ ಪರಿಹಾರ ಸಿಗದಿದ್ದರೆ ಹೋರಾಟ ಮುಂದುವರಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT