ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರವಾಡ: ಭೂಸ್ವಾಧೀನ ಅಧಿಕಾರಿಗಳ ಕಚೇರಿ ಜಪ್ತಿ

Last Updated 4 ಜನವರಿ 2011, 11:00 IST
ಅಕ್ಷರ ಗಾತ್ರ

ಧಾರವಾಡ: ಬೆಣ್ಣೆಹಳ್ಳ ಸೇತುವೆ ನಿರ್ಮಾಣಕ್ಕೆ 2001ರಲ್ಲಿ ನವಲಗುಂದ ತಾಲ್ಲೂಕಿನಲ್ಲಿ ವಶಪಡಿಸಿಕೊಂಡಿದ್ದ ರೈತರ ಭೂಮಿಗೆ ಪರಿಹಾರ ನೀಡದ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದ ಮೇರೆಗೆ ಇಲ್ಲಿನ ಮಿನಿ ವಿಧಾನಸೌಧದಲ್ಲಿರುವ ರಾಷ್ಟ್ರೀಯ ಹೆದ್ದಾರಿ ವಿಶೇಷ ಭೂಸ್ವಾಧೀನ ಅಧಿಕಾರಿಗಳ ಕಾರ್ಯಾಲಯದ ವಸ್ತುಗಳನ್ನು ಜಪ್ತಿ ಮಾಡಲಾಯಿತು.

ಸೇತುವೆಗೆ ಎಂಟು ಜನ ರೈತರ ಭೂಮಿ ಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಕಳೆದ ನವೆಂಬರ್ 22 ರಂದು 10 ಎಕರೆ ಭೂಮಿ ಕಳೆದುಕೊಂಡ ರೈತರಿಗೆ ಬಡ್ಡಿ ಸಮೇತ 25 ಲಕ್ಷ ರೂ. ಪರಿಹಾರ ನೀಡಬೇಕು, ಇಲ್ಲದಿದ್ದಲ್ಲಿ ಜಪ್ತಿ ಮಾಡಬೇಕು ಇಲ್ಲಿನ 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಆದೇಶ ನೀಡಿದ್ದರು. ಕೋರ್ಟ್ ಆದೇಶದಂತೆ ಕೋರ್ಟ್ ಸಿಬ್ಬಂದಿ ಸೋಮವಾರ ಜಪ್ತ್ ಪ್ರಕ್ರಿಯೆ ನಡೆಸಿತು. ಕಚೇರಿಯ ಝೆರಾಕ್ಸ್ ಯಂತ್ರ, ಕುರ್ಚಿ, ಟೇಬಲ್, ಕಂಪ್ಯೂಟರ್ ಮತ್ತಿತರ ವಸ್ತುಗಳನ್ನು ಜಪ್ತಿ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT