ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧ್ವನಿಮುದ್ರಿಕೆ ಸೋರಿಕೆ ಪ್ರಕರಣ;ಕೋರ್ಟ್‌ಗೆ ಪ್ರಮಾಣ ಪತ್ರ

Last Updated 1 ಫೆಬ್ರುವರಿ 2011, 17:50 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ರತನ್ ಟಾಟಾ ಮತ್ತು ಕಾರ್ಪೊರೇಟ್ ಮಧ್ಯವರ್ತಿ ನೀರಾ ರಾಡಿಯಾ ಅವರ ನಡುವಿನ ಸಂಭಾಷಣೆಯ ಧ್ವನಿಮುದ್ರಿಕೆ ಸೋರಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಈ ಬಗ್ಗೆ ವಿಚಾರಣೆ ನಡೆಸಲು ಆದೇಶಿಸಲಾಗಿದೆ ಎಂದು ಮಂಗಳವಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

ಇಂತಹ ಮಹತ್ವದ ಮಾಹಿತಿ ಸೋರಿಕೆಯಾಗಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ವಿಚಾರಣೆಗೆ ಆದೇಶಿಸಲಾಗಿದೆ ಎಂದು ಆದಾಯ ತೆರಿಗೆ ಹೆಚ್ಚುವರಿ ನಿರ್ದೇಶಕರ (ತನಿಖೆ) ಪರವಾಗಿ ಸಲ್ಲಿಸಲಾಗಿರುವ ಪ್ರಮಾಣಪತ್ರದಲ್ಲಿ ತಿಳಿಸಲಾಗಿದೆ.

ಕೋರ್ಟಿನಲ್ಲಿ ತಾವು ಸಲ್ಲಿಸಿರುವ ಅರ್ಜಿಯ ಬಗ್ಗೆ ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ ಎಂಬ ಟಾಟಾ ಅವರ ಆಪಾದನೆಯನ್ನು ಪ್ರಮಾಣ ಪತ್ರದಲ್ಲಿ ಅಲ್ಲಗಳೆಯಲಾಗಿದೆ. ಧ್ವನಿಮುದ್ರಿಕೆಯನ್ನು ಮುಕ್ತವಾಗಿ ಹಂಚಲಾಗಿದೆ ಹಾಗೂ ಪತ್ರಿಕೆಗಳಲ್ಲಿ ಪ್ರಕಟವಾಗುವಂತೆ ನೋಡಿಕೊಳ್ಳಲಾಗಿದೆ ಎಂದು ಟಾಟಾ ಅವರು ತಮ್ಮ ಅರ್ಜಿಯಲ್ಲಿ ದೂರಿದ್ದು, ಸರ್ಕಾರ ಇದನ್ನು ನಿರಾಕರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT