ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ.6 ರಂದು ಕನ್ನಡ ಸಾಹಿತ್ಯ ಸಮ್ಮೇಳನ

Last Updated 1 ಅಕ್ಟೋಬರ್ 2011, 9:50 IST
ಅಕ್ಷರ ಗಾತ್ರ

ಮಡಿಕೇರಿ: ಮಡಿಕೇರಿ ತಾಲ್ಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕಳಕೇರಿ ನಿಡುಗಣೆ ಗ್ರಾಮ ಪಂಚಾಯಿತಿ, ಗಾಳಿಬೀಡು ಗ್ರಾಮ ಪಂಚಾಯಿತಿ ಹಾಗೂ ಗಾಳಿಬೀಡಿನ ಜವಾಹರ್ ನವೋದಯ ವಿದ್ಯಾಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಗಾಳಿಬೀಡಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ ನವೆಂಬರ್ 6 ರಂದು ಏರ್ಪಡಿಸಲು ತೀರ್ಮಾನಿಸಲಾಗಿದೆ.

ಸಮ್ಮೇಳನದ ಪ್ರಯುಕ್ತ ಕವಿಗೋಷ್ಠಿಯನ್ನು ಏರ್ಪಡಿಸಲಾಗಿದ್ದು, ಭಾಗವಹಿಸಲು ಬಯಸುವ ಕವಿಗಳು ತಮ್ಮ ಕನ್ನಡ/ಕೊಡವ  ಭಾಷೆಯ ಸ್ವರಚಿತ ಕವನವನ್ನು ಅಕ್ಟೋಬರ್ 15 ರೊಳಗೆ ಕೆ.ಟಿ. ಬೇಬಿ ಮ್ಯೋಥ್ಯು, ಅಧ್ಯಕ್ಷರು, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಚರ್ಚ್ ಕಾಂಪ್ಲೆಕ್ಸ್, ಚಿಕ್ಕಪೇಟೆ, ಮಡಿಕೇರಿ ಇಲ್ಲಿಗೆ ತಲುಪಿಸುವಂತೆ ಕೋರಿದ್ದಾರೆ.

ಅವಧಿಯ ನಂತರ ಬಂದ ಕವನಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ                 ಮೊಬೈಲ್ ಸಂಖ್ಯೆ 9448060466 ಅನ್ನು ಸಂಪರ್ಕಿಸಬಹುದು ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ತಿಳಿಸಿದ್ದಾರೆ.

ಸಮ್ಮೇಳನದ ಪ್ರಯುಕ್ತ ಅಂದು ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದ್ದು,             ಕಾರ್ಯಕ್ರಮದಲ್ಲಿ ಭಾಗವಹಿಸಲು ಬಯಸುವ ತಂಡಗಳು ತಮ್ಮ ಪೂರ್ಣ ವಿವರ ಹಾಗೂ ಕಲಾ ಪ್ರಕಾರದ ವಿವರಗಳನ್ನು ಅಕ್ಟೋಬರ್ 15 ರೊಳಗೆ ಪಿ. ಶೈಲಾ,  ಅಧ್ಯಕ್ಷರು, ಸಾಂಸ್ಕೃತಿಕ ಸಮಿತಿ, 5ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಗ್ರಾಮ ಪಂಚಾಯಿತಿ ಕಚೇರಿ, ಗಾಳಿಬೀಡು ಅಂಚೆ ಇವರಿಗೆ ತಲುಪಿಸುವಂತೆ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT