ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಕಲಿ ಕೀಟನಾಶಕ ಪ್ರಕರಣ ಏನಾಯಿತು?

Last Updated 5 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ವಿಜಾಪುರದಲ್ಲಿ ಕಳೆದ ವರ್ಷದ ಅಕ್ಟೋಬರ್‌ನಲ್ಲಿ ನಕಲಿ ಕೀಟನಾಶಕ ತಯಾರಿಸುವ ಜಾಲವೊಂದು ಪತ್ತೆಯಾಗಿತ್ತು. ಕಳೆದ ಐದು ವರ್ಷಗಳಿಂದ ಸುಮಾರು 5 ಕೋಟಿ ರೂ ಮೊತ್ತದ ನಕಲಿ ಕೀಟನಾಶಕ ತಯಾರಿಸಿ ಮಾರಾಟ ಮಾಡಿರಬಹುದೆಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿತ್ತು. ಈ ವಿಷಯ ಹಲವು ಪತ್ರಿಕೆಗಳಲ್ಲಿ ವರದಿಯಾಗಿದೆ.

ಪ್ರಕರಣ ಬೆಳಕಿಗೆ ಬಂದು ನಾಲ್ಕು ತಿಂಗಳು ಕಳೆದರೂ ಜಿಲ್ಲಾಧಿಕಾರಿಗಳಾಗಲಿ, ಜಿಲ್ಲಾ ಪಂಚಾಯ್ತಿಯಾಗಲಿ,  ಕೃಷಿ ಇಲಾಖೆ ಸಂಬಂಧಿಸಿದ ಸಂಸ್ಥೆ ವಿರುದ್ಧ ಇದುವರೆಗೆ ಯಾವುದೇ ಕ್ರಮ ಜರುಗಿಸದಿರುವುದು ಪರಿಶೀಲನೆಯಿಂದ ತಿಳಿದುಬಂದಿದೆ.

ಈ ಪ್ರಕರಣವನ್ನು ಮುಚ್ಚಿಹಾಕಲಾಯಿತೇ? ಸಂಬಂಧಿಸಿದ ಇಲಾಖೆ ಈ ಪ್ರಕರಣದಲ್ಲಿ ಶಾಮೀಲಾಗಿವೆಯೇ? ಅಥವಾ  ರಾಜಕೀಯ ಒತ್ತಡಗಳು ಕೆಲಸ ಮಾಡಿವೆಯೇ? ಎಂಬ ಸಾರ್ವಜನಿಕರ ಅನುಮಾನಗಳಿಗೆ ಉತ್ತರ ಸಿಗಬೇಕಿದೆ.

ನಕಲಿ ಕೀಟನಾಶಕ ಮಾರಾಟ ಮಾಡುತ್ತಿದ್ದ ಅಂಗಡಿಗಳನ್ನು ಸ್ವಾಧೀನ ಪಡಿಸಿಕೊಂಡಿಲ್ಲ. ಈಗಲಾದರೂ ಸಂಬಂಧಪಟ್ಟವರು ಕ್ರಮ ಜರುಗಿಸುತ್ತಾರೆ ಎಂದು ನಂಬಬಹುದೇ?

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT