ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಕ್ಸಲ್‌ಪೀಡಿತ ಪ್ರದೇಶಗಳಲ್ಲಿ ಬಿಎಸ್ಸೆನ್ನೆಲ್ ಮೊಬೈಲ್ ಗೋಪುರ

Last Updated 12 ಜನವರಿ 2014, 12:49 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಬಿಎಸ್ಸೆನ್ನೆಲ್ ನಕ್ಸಲ್‌ಪೀಡಿತ ಪ್ರದೇಶಗಳಲ್ಲಿ 450 ಮೊಬೈಲ್ ಗೋಪುರಗಳನ್ನು ನಿರ್ಮಿಸಲು ಯೋಜನೆ ರೂಪಿಸಿದೆ ಎಂದು ದೂರ ಸಂಪರ್ಕ ಇಲಾಖೆ ತಿಳಿಸಿದೆ.

ಪ್ರಸಕ್ತ ವರ್ಷದ ಕೊನೆಯ ವೇಳೆಗೆ ಮೊಬೈಲ್‌ ಗೋಪುರ ನಿರ್ಮಿಸಲು ಉದ್ದೇಶಿಸಲಾಗಿದೆ. ಟೆಂಡರ್ ತೆರೆಯಲಾಗಿದ್ದು, ಗುತ್ತಿಗೆದಾರರ ಆಯ್ಕೆ, ಮಾರುಕಟ್ಟೆ ದರದ ಬಗ್ಗೆ ದೂರ ಸಂಪರ್ಕ ಆಯೋಗ ಅಂತಿಮ ನಿರ್ಧಾರ ಕೈಗೊಂಡ ನಂತರ ಆಯೋಗದಿಂದ ಮಂಜೂರಾತಿ ದೊರೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೂರ ಸಂಪರ್ಕ ಆಯೋಗ ಉದ್ದೇಶಿತ ಯೋಜನೆಗೆ ಪ್ರಸಕ್ತ ತಿಂಗಳಲ್ಲಿ ಒಪ್ಪಿಗೆ ಸೂಚಿಸಲಿದೆ. ಮಂಜೂರಾತಿ ದೊರೆತ ನಂತರ ಕೆಲಸ ಆರಂಭಿಸಲಾಗುವುದು ಎಂದು ಹೇಳಿದ್ದಾರೆ.

ಬಿಎಸ್ಸೆನ್ನೆಲ್ ಈಗಾಗಲೇ 360 ಮೊಬೈಲ್ ಗೋಪುರಗಳನ್ನು ನಿರ್ಮಿಸಿದೆ. ಮತ್ತೆ 450 ಮೊಬೈಲ್ ಗೋಪುರಗಳನ್ನು ನಿರ್ಮಿಸಲು ಉದ್ದೇಶಿಸಿದೆ ಎಂದು ತಿಳಿಸಿದ್ದಾರೆ.

ಮೂರು ವರ್ಷಗಳ ಹಿಂದೆ ನಕ್ಸಲ್‌ಪೀಡಿತ ಪ್ರದೇಶದಲ್ಲಿ ರೂ. 3,046 ಕೋಟಿ ವೆಚ್ಚದಲ್ಲಿ ಮೊಬೈಲ್ ಗೋಪುರ ನಿರ್ಮಿಸುವ ಬಗ್ಗೆ ಪ್ರಸ್ತಾವ ಸಲ್ಲಿಸಲಾಗಿತ್ತು. ಚತ್ತಿಸ್‌ಗಢದಲ್ಲಿ ಕಾಂಗ್ರೆಸ್‌ ಮುಖಂಡ ಸೇರಿದಂತೆ 27 ಜನ ನಕ್ಸಲರ ದಾಳಿಗೆ ಬಲಿಯಾದ ನಂತರ ನಂತರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT