ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಗರ ನೀರು ಸರಬರಾಜಿಗೆ ರೂ 1,150 ಕೋಟಿ

Last Updated 24 ಫೆಬ್ರುವರಿ 2011, 20:20 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವಿವಿಧ ಕಾಮಗಾರಿಗಳಿಗಾಗಿ ಈ ಬಜೆಟ್‌ನಲ್ಲಿ 1,150 ಕೋಟಿ ರೂಪಾಯಿಗಳನ್ನು ಒದಗಿಸಲಾಗಿದೆ.

ಮಂಡಳಿಯು ಒಟ್ಟು ರೂ 3,384 ಕೋಟಿ ಯೋಜನಾ ವೆಚ್ಚದಲ್ಲಿ ಕಾವೇರಿ ನೀರು ಸರಬರಾಜು ಯೋಜನೆ ಹಂತ-4, ಘಟಕ-2 ಅನ್ನು ಅನುಷ್ಠಾನಗೊಳಿಸುತ್ತಿದೆ. ಯೋಜನೆ ಪೂರ್ಣಗೊಂಡ ಮೇಲೆ ಮಾರ್ಚ್ 2012ರ ವೇಳೆಗೆ 500 ಎಂಎಲ್‌ಡಿ (ಪ್ರತಿದಿನ ಒಂದು ಮಿಲಿಯನ್ ಲೀಟರ್) ನೀರು 12 ಲಕ್ಷಕ್ಕೂ ಅಧಿಕ ಜನರಿಗೆ ಲಭ್ಯವಾಗಲಿದೆ. ಈ ಯೋಜನೆಯಡಿ ಹೊಸದಾಗಿ ಸೇರ್ಪಡೆಯಾದ 7 ನಗರಸಭೆಗಳು, 1 ಪುರಸಭೆ ಹಾಗೂ 110 ಗ್ರಾಮಗಳು ಒಳಗೊಳ್ಳಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT