ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಗರದ 350 ಮಕ್ಕಳಲ್ಲಿ ಅಪೌಷ್ಟಿಕತೆ

Last Updated 13 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಆರು ವರ್ಷದೊಳಗಿನ ಮಕ್ಕಳ ಅಪೌಷ್ಟಿಕತೆಯನ್ನು ತಡೆಯಲು ಬಿಬಿಎಂಪಿ ಶುಕ್ರವಾರ ಉಚಿತ ಆರೋಗ್ಯ ಶಿಬಿರವನ್ನು ಏರ್ಪಡಿಸಿತ್ತು.

ಮಕ್ಕಳಲ್ಲಿನ ಅಪೌಷ್ಟಿಕತೆಯನ್ನು ನಿವಾರಿಸಲು ಮೂರನೇ ಹಂತದ ತಪಾಸಣಾ ಶಿಬಿರವನ್ನು ಏರ್ಪಡಿಸಿದ್ದು, ಶುಕ್ರವಾರ ಒಟ್ಟು 12,599 ಮಕ್ಕಳನ್ನು ತಪಾಸಣೆಗೆ ಒಳಪಡಿಸಲಾಯಿತು. ತಪಾಸಣೆಗೆ ಒಳಗಾದವರಲ್ಲಿ 350 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಎಂದು ಶಿಫಾರಸು ಮಾಡಲಾಗಿದೆ.

ಶಿಬಿರದಲ್ಲಿ ಅಪೌಷ್ಟಿಕ ಮಕ್ಕಳಿಗೆ ವಿಶೇಷ ತಜ್ಞ ವೈದ್ಯರಿಂದ ಪರೀಕ್ಷೆ ನಡೆಸಲಾಯಿತು. ತಪಾಸಣೆಯ ಜತೆಗೆ ಉಚಿತವಾಗಿ ಔಷಧಗಳನ್ನು ವಿತರಿಸಲಾಯಿತು. ಪಾಲಿಕೆಯ ಎಲ್ಲ ಆರೋಗ್ಯ ಕೇಂದ್ರಗಳು, ನಗರ ಕುಟುಂಬ ಕಲ್ಯಾಣ ಕೇಂದ್ರ ಮತ್ತು ಔಷಧಾಲಯಗಳಲ್ಲಿ ಶಿಬಿರ ಹಮ್ಮಿಕೊಳ್ಳಲಾಗಿತ್ತು.

  ಕೊಳಗೇರಿ ನಿವಾಸಿಗಳು ಹಾಗೂ ತಾತ್ಕಾಲಿಕ ಗುಡಿಸಲುಗಳಲ್ಲಿರುವ ಕಟ್ಟಡ ನಿರ್ಮಾಣ ಕೆಲಸಗಾರರ ಮಕ್ಕಳ ಆರೋಗ್ಯ ತಪಾಸಣೆ ನಡೆಸಲಾಯಿತು.  ಶಿಬಿರದಲ್ಲಿ ಗರ್ಭಿಣಿಯರು ಮತ್ತು ಬಾಣಂತಿಯರಿಗೂ ಆರೋಗ್ಯ ತಪಾಸಣೆ ನಡೆಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT