ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಗರದಲ್ಲಿ `ಅನ್ನಭಾಗ್ಯ'ಕ್ಕೆ ಚಾಲನೆ

Last Updated 10 ಜುಲೈ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: `ನಗರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಲಾಗುವುದು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ನಗರದಲ್ಲಿ `ಅನ್ನಭಾಗ್ಯ' ಯೋಜನೆಗೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು. `ನಗರದಲ್ಲಿ ಅನೇಕ ಸಮಸ್ಯೆಗಳಿವೆ. ಹಿಂದಿನ ಸರ್ಕಾರ ಈ ಸಮಸ್ಯೆಗಳನ್ನು ಬಗೆಹರಿಸಿಲ್ಲ. ಕಸ ವಿಲೇವಾರಿ ಸಮಸ್ಯೆಯನ್ನು ಬಗೆಹರಿಸಿಲ್ಲ.

ನಗರದ ಅನೇಕ ಕಡೆಗಳಲ್ಲಿ ಮಣ್ಣಿನ ರಸ್ತೆಗಳಿವೆ. ಈ ರಸ್ತೆಗಳನ್ನು ಮೇಲ್ದರ್ಜೆಗೆ ಏರಿಸುವ ಕೆಲಸ ಆಗಿಲ್ಲ. ಬಿಬಿಎಂಪಿ ವ್ಯಾಪ್ತಿಯಲ್ಲಿ ಚೆನ್ನಾಗಿರುವ ರಸ್ತೆಗಳಿಗೇ ಡಾಂಬರು ಹಾಕಲಾಗುತ್ತಿದೆ. ಇಂತಹ ಪ್ರವೃತ್ತಿಗೆ ತಡೆ ಒಡ್ಡಿ ಮಣ್ಣಿನ ರಸ್ತೆಗಳಿಗೆ ಡಾಂಬರು ಹಾಕಲು ಮೊದಲ ಆದ್ಯತೆ ನೀಡುವಂತೆ ಸೂಚಿಸಲಾಗಿದೆ' ಎಂದರು.

`ನಗರದ ಸಾರಿಗೆ ವ್ಯವಸ್ಥೆ ಬಲಪಡಿಸಬೇಕು. ಸಂಚಾರ ದಟ್ಟಣೆ ಕಡಿವೆು ಮಾಡಬೇಕಿದೆ. ಬಿಬಿಎಂಪಿಯಲ್ಲೂ ಹಣ ಇಲ್ಲ. ನಗರಕ್ಕೆ ಹೆಚ್ಚಿನ ಸಹಾಯದ ಅಗತ್ಯ ಇದೆ. ನಗರ ಎದುರಿಸುತ್ತಿರುವ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲು ಹೆಚ್ಚಿನ ನೆರವು ನೀಡಲಾಗುವುದು' ಎಂದು ಅವರು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, `ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ಸ್ವಚ್ಛ ಬೆಂಗಳೂರು ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ನಂತರದ ಸರ್ಕಾರಗಳು ಈ ಯೋಜನೆಯನ್ನು ಕೈಬಿಟ್ಟವು. ಉದ್ಯಾನನಗರಿ ಈಗ ಕಸದ ನಗರಿ ಎಂಬ ಕುಖ್ಯಾತಿಗೆ ಪಾತ್ರವಾಗಿದೆ.  ಈ ನಿಟ್ಟಿನಲ್ಲಿ ನಗರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಬೇಕು' ಎಂದು ಮನವಿ ಮಾಡಿದರು.

ಕೃಷಿ ಸಚಿವ ಕೃಷ್ಣ ಬೈರೇಗೌಡ, ಶಾಸಕರಾದ ರೋಶನ್ ಬೇಗ್, ಎನ್.ಎ.ಹ್ಯಾರಿಸ್, ಆರ್.ವಿ.ದೇವರಾಜ್, ಎಸ್.ಟಿ. ಸೋಮಶೇಖರ್, ಮುನಿರತ್ನ, ಟಿ.ವೆಂಕಟರಮಣಯ್ಯ, ವಿಧಾನ ಪರಿಷತ್ ಸದಸ್ಯರಾದ ಎಂ.ವಿ. ರಾಜಶೇಖರನ್, ಆರ್.ವಿ.ದೇವರಾಜ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಾರ್ಯದರ್ಶಿ ಕೆ.ಎಚ್.ಅಶ್ವತ್ಥನಾರಾಯಣ ಗೌಡ, ಆಯುಕ್ತ ಹರ್ಷ ಗುಪ್ತ ಮತ್ತಿತರರು ಹಾಜರಿದ್ದರು.

ತುಂಬಿ ತುಳುಕಿದ ವೇದಿಕೆ
ಕಾಂಗ್ರೆಸ್‌ನ ಹಿರಿಯ-ಕಿರಿಯ ಮುಖಂಡರು, ಅಧಿಕಾರಿಗಳು ವೇದಿಕೆಯಲ್ಲಿ ಕಾಣಿಸಿಕೊಂಡಿದ್ದರಿಂದ `ಅನ್ನಭಾಗ್ಯ' ಯೋಜನೆಯ ಉದ್ಘಾಟನಾ ಕಾರ್ಯಕ್ರಮದ ವೇದಿಕೆ ತುಂಬಿ ತುಳುಕಿತು!  ಕಾರ್ಯಕ್ರಮಕ್ಕೆ ಗೃಹ ಸಚಿವ, ಜಿಲ್ಲಾ ಹಾಗೂ ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರನ್ನು ಮುಖ್ಯ ಅತಿಥಿಗಳನ್ನಾಗಿ, ನಗರ ಹಾಗೂ ಗ್ರಾಮಾಂತರ ಜಿಲ್ಲೆಯ ಸಂಸದರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರನ್ನು ವಿಶೇಷ ಆಹ್ವಾನಿತರನ್ನಾಗಿ ಆಹ್ವಾನಿಸಲಾಗಿತ್ತು. ಈ ಪೈಕಿ ಕಾಂಗ್ರೆಸ್ ಪಕ್ಷದ ಶಾಸಕರು ಮಾತ್ರ ಹಾಜರಿದ್ದರು.

ಇವರೊಂದಿಗೆ ಕೆಲವು ಕಾಂಗ್ರೆಸ್ ಮುಖಂಡರು ವೇದಿಕೆಯನ್ನೇರಿದರು. ಮಾಜಿ ಸಚಿವ ಎಚ್.ಎಂ. ರೇವಣ್ಣ ವೇದಿಕೆಯಲ್ಲೇ ಇದ್ದು `ಮಾರ್ಗದರ್ಶನ' ಮಾಡುತ್ತಿದ್ದರು. ಉಳಿದಂತೆ ಮಾಜಿ ಸಚಿವೆ ರಾಣಿ ಸತೀಶ್, ಜಲಜಾ ನಾಯಕ್, ಸಾ.ರಾ.ಗೋವಿಂದು, ಬಿಬಿಎಂಪಿ ಸದಸ್ಯ ಉದಯಶಂಕರ್ ಸೇರಿದಂತೆ ಅನೇಕ ಮುಖಂಡರು ವೇದಿಕೆಯಲ್ಲಿ ಕಾಣಿಸಿಕೊಂಡರು. ಈ ಮೂಲಕ ಸರ್ಕಾರಿ ಕಾರ್ಯಕ್ರಮದ ಶಿಷ್ಟಾಚಾರವನ್ನು ಉಲ್ಲಂಘಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT