ಮುಂಬೈ, (ಪಿಟಿಐ): ಅಧಿಕಾರಿಗಳೊಂದಿಗೆ ದುರ್ವರ್ತನೆ ತೋರಿದ್ದು ಹಾಗೂ ನಿಯಮಾವಳಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಐದು ವರ್ಷಗಳ ಕಾಲ ವಾಂಖೇಡೆ ಕ್ರೀಡಾಂಗಣವನ್ನು ಪ್ರವೇಶಿಸದಂತೆ ಕೋಲ್ಕೊತ್ತ ನೈಟ್ ರೈಡರ್ಸ್ ಸಹ ಮಾಲೀಕ ಹಾಗೂ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ವಿರುದ್ಧ ಮುಂಬೈ ಕ್ರಿಕೆಟ್ ಅಸೋಸಿಯೇಶನ್ (ಎಂಸಿಎ) ಶುಕ್ರವಾರ ನಿಷೇಧ ವಿಧಿಸಿದೆ.