ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಟಿ ಸುಚಿತ್ರಾ ಸೇನ್ ಸ್ಥಿತಿ ಗಂಭೀರ

Last Updated 1 ಜನವರಿ 2014, 19:30 IST
ಅಕ್ಷರ ಗಾತ್ರ

ಕೋಲ್ಕತ್ತ (ಪಿಟಿಐ): ಹಿರಿಯ ನಟಿ ಸುಚಿತ್ರಾ ಸೇನ್‌ ಅವರ ಹೃದಯ ಬಡಿತದಲ್ಲಿ ಏರುಪೇರು ಉಂಟಾಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಇಲ್ಲಿನ ಖಾಸಗಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಶ್ವಾಸಕೋಶದ ಸೋಂಕಿನಿಂದ ಬಳಲು­ತ್ತಿರುವ ಸುಚಿತ್ರಾ ಅವರಿಗೆ ರೋಗ­ನಿರೋಧಕ ಸೇರಿ­ದಂತೆ ಇತರ ಚಿಕಿತ್ಸೆ ನೀಡಲಾಗುತ್ತಿದೆ. ಆದರೂ ಹೃದಯ ಬಡಿತ­ದಲ್ಲಿ ಏರು­ಪೇರು ಉಂಟಾ­ಗುತ್ತಿದ್ದು, ತೀವ್ರ ನಿಗಾ ವಹಿಸ­ಲಾಗಿದೆ.

ಮಂಗಳವಾರ ರಾತ್ರಿ ಸುಚಿತ್ರಾ ಅವರು ಆಹಾರ ಸೇವಿಸಿ ಚೆನ್ನಾಗಿ ನಿದ್ದೆ ಮಾಡಿದ್ದಾರೆ. ಅವರ ದೇಹದ ಜೈವಿಕ ಚಟುವಟಿಕೆಗಳು ಸಮರ್ಪಕವಾಗಿ ಕಾರ್ಯ­­ನಿರ್ವಹಿಸುತ್ತಿವೆ. ಆದರೆ, ಅವರ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ­ಯನ್ನು ಮುಂದೂಡಲಾಗಿದೆ  ಎಂದು ವೈದ್ಯರು  ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT