ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಮ್ಮ ಮೆಟ್ರೊ ಉದ್ಘಾಟನೆಗೆ ಸಿದ್ಧ

Last Updated 15 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: `ನಮ್ಮ ಮೆಟ್ರೊ~ ರೈಲು ಸಂಚಾರದ ಉದ್ಘಾಟನಾ ಸಮಾರಂಭದ ದಿನ ಸಮೀಪವಾಗುತ್ತಿದ್ದಂತೆಯೇ ಈ ಭಾಗದ ರಸ್ತೆಗಳನ್ನು ಸುಂದರಗೊಳಿಸುವ ಕಾರ್ಯವನ್ನು ಬಿಬಿಎಂಪಿ ಚುರುಕುಗೊಳಿಸಿದೆ.

ಪಾಲಿಕೆ ಆಯುಕ್ತ ಸಿದ್ದಯ್ಯ ಅವರು ಶನಿವಾರ ಈ ಭಾಗದ ರಸ್ತೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಮಾತನಾಡಿದ ಅವರು, `ಮೆಟ್ರೊ ರೈಲು ಮಾರ್ಗಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ಹಾಗೂ ಆ ರಸ್ತೆಗಳ ಪಾದಚಾರಿ ಮಾರ್ಗ, ಜಂಕ್ಷನ್‌ಗಳನ್ನು ಅಭಿವೃದ್ಧಿಪಡಿಸುವ ಕಾರ್ಯ ಎರಡು ವಾರಗಳಿಂದ ನಡೆದಿದೆ. ಎಂ.ಜಿ. ರಸ್ತೆ, ಟ್ರಿನಿಟಿ ವೃತ್ತ, ಸಿ.ಎಂ.ಎಚ್. ರಸ್ತೆಗಳಲ್ಲಿ ಡಾಂಬರೀಕರಣ ಕಾರ್ಯ ಪ್ರಗತಿಯಲ್ಲಿದ್ದು, ಇನ್ನು ಎರಡು ಮೂರು ದಿನಗಳಲ್ಲಿ ಪೂರ್ಣಗೊಳ್ಳಲಿದೆ~ ಎಂದು ಹೇಳಿದರು.

`ಎಂ.ಜಿ. ರಸ್ತೆಯಿಂದ ಟ್ರಿನಿಟಿ ವೃತ್ತದವರೆಗಿನ ರಸ್ತೆ, ಕಬ್ಬನ್ ರಸ್ತೆ ಮತ್ತು ಸ್ಯಾಂಕಿ ರಸ್ತೆಗಳಲ್ಲಿ ಗಿಡ ನೆಡುವ ಕಾರ್ಯ ಭರದಿಂದ ಸಾಗಿದೆ. ಪಾದಚಾರಿ ಮಾರ್ಗದಲ್ಲಿ ಸುರಿಯಲಾದ ಕಲ್ಲು, ಮಣ್ಣಿನ ರಾಶಿ, ಇತರೆ ತ್ಯಾಜ್ಯವನ್ನು ತೆರವುಗೊಳಿಸಿ ಸಾರ್ವಜನಿಕರ ಓಡಾಟಕ್ಕೆ ಅನುಕೂಲ ಮಾಡಿಕೊಡಲಾಗುತ್ತಿದೆ~ ಎಂದು ಸಿದ್ದಯ್ಯ ತಿಳಿಸಿದರು.

`ಟ್ರಿನಿಟಿ ವೃತ್ತದಲ್ಲಿ ಮ್ಯಾನ್‌ಹೋಲ್‌ನಿಂದ ಹೊರಬಂದ ನೀರು ರಸ್ತೆ ಮೇಲೆ ಹರಿಯುತ್ತಿದ್ದರಿಂದ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿತ್ತು. ಹಾಗಾಗಿ ಈ ನೀರು ಹರಿದು ಹೋಗಲು ಪ್ರತ್ಯೇಕ ಕೊಳವೆ ಅಳವಡಿಸಲಾಗಿದ್ದು, ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಇದರಿಂದ ವಾಹನ ಸಂಚಾರ ಸುಗಮವಾಗಲಿದೆ.

ಮೆಟ್ರೊ ಮಾರ್ಗ ಹಾದು ಹೋಗಿರುವ ಪ್ರಮುಖ ರಸ್ತೆಗಳಲ್ಲಿ ಸುಂದರವಾಗಿ ಕಾಣುವ ನಾಮಫಲಕಗಳನ್ನು ಅಳವಡಿಸಲಾಗುತ್ತಿದೆ~ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT