ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಮ್ಮ ಮೆಟ್ರೊ ಕಾಮಗಾರಿ: 13 ಗುತ್ತಿಗೆದಾರರಿಗೆ ನೋಟಿಸ್‌

ಕಾರ್ಮಿಕರ ದುಃಸ್ಥಿತಿ ದೂರಿನ ವಿಚಾರಣೆ
Last Updated 18 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಬೆಂಗಳೂರು: ನಮ್ಮ ಮೆಟ್ರೊ’ ಯೋಜನೆಯಡಿ ವಿವಿಧ ಕಾಮಗಾರಿ ಕೈಗೊಂಡಿರುವ 13 ಗುತ್ತಿಗೆದಾರರಿಗೆ ನೋಟಿಸ್ ಜಾರಿಗೆ ಹೈಕೋರ್ಟ್ ಬುಧವಾರ ಆದೇಶಿಸಿದೆ.

‘ನಮ್ಮ ಮೆಟ್ರೊ’ ಯೋಜನೆಯ ಕಾಮಗಾರಿಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಸ್ಥಿತಿ ಉತ್ತಮವಾಗಿಲ್ಲ ಎಂದು ದೂರಿ ಸ್ಯಾಮ್ಯುವೆಲ್‌ ಸತ್ಯಶೀಲನ್‌ ಎಂಬುವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ಎಚ್‌. ವಘೇಲಾ ಮತ್ತು ನ್ಯಾಯಮೂರ್ತಿ ಎಸ್‌.ಎನ್‌. ಸತ್ಯನಾರಾಯಣ ಅವರನ್ನು ಒಳಗೊಂಡ ವಿಭಾಗೀಯ ಪೀಠ ಈಆದೇಶ ನೀಡಿತು.

‘ಕಾರ್ಮಿಕರ ಕಲ್ಯಾಣಕ್ಕೆ ಆದ್ಯತೆ ನೀಡದ ಗುತ್ತಿಗೆದಾರರ ಹೆಸರನ್ನು ನಮಗೆ ತಿಳಿಸಿ. ಅವರಿಗೆ ನೋಟಿಸ್‌ ಜಾರಿ ಮಾಡಿ, ನಾವೇ ಅವರಿಗೆ ಎಚ್ಚರಿಕೆ ನೀಡುತ್ತೇವೆ’ ಎಂದು ಪೀಠ ಹಿಂದಿನ ಬಾರಿ ವಿಚಾರಣೆಯ ವೇಳೆ ಮೌಖಿಕವಾಗಿ ಹೇಳಿತ್ತು.

ಅರ್ಜಿಯ ವಿಚಾರಣೆಯನ್ನು ಜನವರಿ 20ಕ್ಕೆ ಮುಂದೂಡಿಕೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT