ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನರೇಂದ್ರ ಮೋದಿ-ರಾಹುಲ್ ಮಾತಿನ ಸಮರ

ಗುಜರಾತ್: ಮೊದಲ ಹಂತದ ಚುನಾವಣಾ ಪ್ರಚಾರಕ್ಕೆ ತೆರೆ
Last Updated 11 ಡಿಸೆಂಬರ್ 2012, 19:39 IST
ಅಕ್ಷರ ಗಾತ್ರ

ಜಾಮ್‌ನಗರ/ ಅಹಮದಾಬಾದ್ (ಪಿಟಿಐ): ಗುಜರಾತ್‌ನಲ್ಲಿ 13ರಂದು ನಡೆಯಲಿರುವ ಮೊದಲ ಹಂತದ ಚುನಾವಣಾ ಪ್ರಚಾರಕ್ಕೆ ಮಂಗಳವಾರ ತೆರೆ ಬಿದ್ದಿದ್ದು, ಪ್ರಚಾರದ ಕೊನೆಯ ದಿನ ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು  ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಪರಸ್ಪರ ವಾಗ್ಯುದ್ಧದಲ್ಲಿ ತೊಡಗಿದರು.

ಗುಜರಾತ್ ಚುನಾವಣಾ ಪ್ರಚಾರದಲ್ಲಿ ಇದೇ ಮೊದಲ ಬಾರಿಗೆ ಕಾಣಿಸಿಕೊಂಡ ರಾಹುಲ್ ಗಾಂಧಿ ಅವರು ತಮ್ಮ ಭಾಷಣದಲ್ಲಿ ಮಹಾತ್ಮಗಾಂಧಿ ಅವರ ಹೆಸರನ್ನು ತರುವುದರ ಮೂಲಕ ವಾಕ್ಸಮರಕ್ಕೆ ತುಪ್ಪ ಸುರಿದರು.

ತಮ್ಮ ಭಾಷಣದಲ್ಲಿ ಗುಜರಾತ್‌ನಲ್ಲಿ ನಡೆಯುವ ಕಡಿಮೆ ಅವಧಿಯ ಅಧಿವೇಶನವನ್ನು ಲೇವಡಿ ಮಾಡಿದ ರಾಹುಲ್ ಗಾಂಧಿ ಅವರಿಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ ಮೋದಿ, ಸಂಸತ್ ಅಧಿವೇಶನದಲ್ಲಿ ರಾಹುಲ್ ಅವರ ಹಾಜರಾತಿ ಅವಧಿಯನ್ನು ಪ್ರಶ್ನಿಸಿದರು.

ಜಾಮ್‌ನಗರದಲ್ಲಿ ಮಂಗಳವಾರ ಚುನಾವಣಾ ರ‌್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ವರ್ಷದಲ್ಲಿ ಗುಜರಾತ್ ವಿಧಾನಸಭಾ ಅಧಿವೇಶನ ನಡೆಯುವುದು ಬರೀ 25 ದಿನ ಎಂದರು.

ಇದಕ್ಕೆ ಪ್ರತಿಯಾಗಿ ಮೋದಿ ಅವರು `ರಾಹುಲ್ ಗಾಂಧಿ ಎಷ್ಟು ದಿನ ಲೋಕಸಭೆ ಕಲಾಪಗಳಲ್ಲಿ ಭಾಗವಹಿಸಿದ್ದಾರೆ? 85 ದಿನದ ಪೈಕಿ ಬರೀ 24 ದಿನ' ಎಂದು ಟೀಕಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT