ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವೆಂಬರ್‌ನಲ್ಲಿ ಫುಟ್‌ಬಾಲ್ ಸೌಹಾರ್ದ ಪಂದ್ಯ

Last Updated 10 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಭಾರತ ರಾಷ್ಟ್ರೀಯ ಫುಟ್‌ಬಾಲ್ ತಂಡದವರು ನವೆಂಬರ್‌ನಲ್ಲಿ ಮಲೇಷ್ಯಾದ ಎದುರು ಎರಡು ಅಂತರರಾಷ್ಟ್ರೀಯ ಸೌಹಾರ್ದ ಫುಟ್‌ಬಾಲ್ ಪಂದ್ಯಗಳನ್ನಾಡಲಿದ್ದಾರೆ.

ಡಿಸೆಂಬರ್‌ನಲ್ಲಿ ಸೌತ್‌ಏಷ್ಯನ್ ಫುಟ್‌ಬಾಲ್ ಫೆಡರೇಷನ್ ಕಪ್ (ಎಸ್‌ಎಎಫ್‌ಎಫ್) ನಡೆಯಲಿರುವ ಹಿನ್ನೆಲೆಯಲ್ಲಿ ಈ ಪಂದ್ಯಗಳು ನಡೆಯಲಿವೆ. ಭಾರತ ತಂಡ ತನ್ನ ಪ್ರದರ್ಶನ ಮಟ್ಟ ಹೆಚ್ಚಿಸಿಕೊಳ್ಳಲು ಇದು ನೆರವಾಗಲಿದೆ. ನವೆಂಬರ್ 13ರಂದು ಗುಹಾಟಿಯ ಗಾಂಧಿ ಅಥ್ಲೆಟಿಕ್ ಕ್ರೀಡಾಂಗಣದಲ್ಲಿ ಹಾಗೂ 16ರಂದು ಕೋಲ್ಕತ್ತದ ಸಾಲ್ಟ್ ಲಾಕೆ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯಲಿವೆ. ಈ ವಿಷಯವನ್ನು ಅಖಿಲ ಭಾರತ ಫುಟ್‌ಬಾಲ್ ಫೆಡರೇಷನ್  (ಎಐಎಎಫ್) ಖಚಿತ ಪಡಿಸಿದೆ.

ಭಾರತ ತಂಡದವರು ಆಗಸ್ಟ್ 25ರಂದು ಗಯಾನ ವಿರುದ್ಧ ಕೊನೆಯ ಸೌಹಾರ್ದ ಪಂದ್ಯವನ್ನಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT