ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾ ಡಿಸೋಜಾಗೆ ಪ್ರತಿಷ್ಠಿತ ಬಾಲ ಸಾಹಿತ್ಯ ಪುರಸ್ಕಾರ

Last Updated 19 ಆಗಸ್ಟ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ನಾಡಿನ ಹೆಸರಾಂತ ಸಾಹಿತಿ ನಾ ಡಿಸೋಜಾ ಅವರು ಈ ವರ್ಷದ ಕೇಂದ್ರ ಸಾಹಿತ್ಯ ಅಕಾಡೆಮಿಯ ಬಾಲ ಸಾಹಿತ್ಯ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.

ಅವರ `ಮುಳುಗಡೆಯ ಊರಿಗೆ ಬಂದವರು~ ಕೃತಿಗೆ ಈ ಪುರಸ್ಕಾರ ಲಭಿಸಿದೆ. ಡಿಸೋಜ ಮಾತ್ರವಲ್ಲದೇ ವಿವಿಧ ಭಾಷೆಗಳ ಒಟ್ಟು 19 ಸಾಹಿತಿಗಳು  ಬಾಲ ಸಾಹಿತ್ಯ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.

ಏಳು ಕವನ ಸಂಕಲನ, ಆರು ಕಾದಂಬರಿ ಮತ್ತು ಐದು ಕಿರು ಕತೆಗಳನ್ನು ಈ ವರ್ಷದ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.

ಅಲ್ಲದೇ, ಮಕ್ಕಳ ಸಾಹಿತ್ಯಕ್ಕೆ ನೀಡಿರುವ ಸಮಗ್ರ ಕೊಡುಗೆಯನ್ನು ಪರಿಗಣಿಸಿ ಐವರು ಲೇಖಕರನ್ನು ಆಯ್ಕೆ ಮಾಡಲಾಗಿದೆ.

ದೇಶದ 24 ಭಾಷೆಗಳನ್ನು ಪ್ರತಿನಿಧಿಸುವ ತೀರ್ಪುಗಾರರ ಮಂಡಳಿಯ ಸದಸ್ಯರು ಮಾಡಿರುವ ಶಿಫಾರಸಿನ ಅನ್ವಯ ಕೇಂದ್ರ ಸಾಹಿತ್ಯ ಅಕಾಡೆಮಿ ಕಾರ್ಯಕಾರಿ ಸಮಿತಿ ಈ ಪುರಸ್ಕಾರಕ್ಕೆ ಸಾಹಿತಿಗಳನ್ನು ಆಯ್ಕೆ ಮಾಡಿದೆ.

ಬಾಲಸಾಹಿತ್ಯ ಪುರಸ್ಕಾರವು 50,000 ರೂಪಾಯಿ ನಗದು ಮತ್ತು ತಾಮ್ರದ ಫಲಕವನ್ನು ಒಳಗೊಂಡಿದೆ. ನವೆಂಬರ್‌ನಲ್ಲಿ ಪುರಸ್ಕಾರ ಪ್ರದಾನ ಸಮಾರಂಭ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT