ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಕೌಟ್ ಪಂದ್ಯಗಳ ಸ್ಥಳಾಂತರ ಸಾಧ್ಯತೆ

Last Updated 20 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಐಪಿಎಲ್ ಟೂರ್ನಿಯ `ಕ್ವಾಲಿಫಯರ್' ಮತ್ತು `ಎಲಿಮಿನೇಟರ್' ಪಂದ್ಯಗಳನ್ನು ಚೆನ್ನೈನಿಂದ ಬೇರೆಡೆಗೆ ಸ್ಥಳಾಂತರಿಸಲು ಐಪಿಎಲ್ ಆಡಳಿತ ಮಂಡಳಿ ಚಿಂತನೆ ನಡೆಸಿದೆ. ಸೋಮವಾರ ಚೆನ್ನೈನಲ್ಲಿ ನಡೆಯಲಿರುವ ಆಡಳಿತ ಮಂಡಳಿ ಸಭೆಯಲ್ಲಿ ಅಂತಿಮ ನಿರ್ಣಯ ಹೊರಬೀಳುವ ಸಾಧ್ಯತೆಯಿದೆ.

ಈ ಬಗ್ಗೆ ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಐಪಿಎಲ್ ಅಧ್ಯಕ್ಷ ರಾಜೀವ್ ಶುಕ್ಲಾ, `ಪಂದ್ಯಗಳ ಸ್ಥಳಾಂತರ ಮಾಡುವ ಕುರಿತು ಏಪ್ರಿಲ್ 22ರಂದು ಚೆನ್ನೈನಲ್ಲಿ ನಡೆಯುವ ಆಡಳಿತ ಮಂಡಳಿ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ' ಎಂದರು.

ಈ ಮೊದಲಿನ ವೇಳಾಪಟ್ಟಿಯಲ್ಲಿ ಮೇ 21ರಂದು ಚೆಪಾಕ್ ಕ್ರೀಡಾಂಗಣದಲ್ಲಿ ಮೊದಲ ಕ್ವಾಲಿಫಯರ್ ನಡೆಯಬೇಕಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT