ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಟಕಗಳಿಗೆ ನೆರವು ನೀಡಿ

Last Updated 13 ಏಪ್ರಿಲ್ 2011, 19:30 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ತಾಲ್ಲೂಕಿನಲ್ಲಿ ನಾಟಕಗಳು ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿದ್ದು, ಇದು ರಂಗಕಲೆ ಶ್ರೀಮಂತವಾಗಿರುವುದಕ್ಕೆ ಸಾಕ್ಷಿಯಾಗಿದೆ ಎಂದು ರಂಗಭೂಮಿ ಕಲಾವಿದ ಕೆ.ಎಂ.ಕೃಷ್ಣಮೂರ್ತಿ ಹೇಳಿದರು. ತಾಲ್ಲೂಕಿನ ಕಾಡನೂರು ಗ್ರಾಮದಲ್ಲಿ ಚನ್ನಕೇಶವಸ್ವಾಮಿ ಕೃಷಾಪೋಷಿತ ನಾಟಕ ಮಂಡಳಿ ವತಿಯಿಂದ ನಡೆದ ನಲ್ಲತಂಗ ಪೌರಾಣಿಕ ನಾಟಕ ಪ್ರದರ್ಶನ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
 

ತಾಲ್ಲೂಕಿನಲ್ಲಿ ಪ್ರತಿ ವರ್ಷ ಬೇಸಿಗೆಯಲ್ಲಿ ನೂರಕ್ಕೂ ಹೆಚ್ಚು ಪೌರಾಣಿಕ ನಾಟಕಗಳ ಪ್ರದರ್ಶನ ನಡೆಯಲಿವೆ. ನಾಟಕಗಳಿಗೆ ಗ್ರಾಮೀಣ ಭಾಗದಲ್ಲಿ ಇನ್ನು ಹೆಚ್ಚಿನ ಪ್ರೋತ್ಸಾಹ ಅಗತ್ಯ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆರ್ಥಿಕ ನೆರವು ನೀಡಬೇಕು ಎಂದು ಮನವಿ ಮಾಡಿದರು.
 

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಲಾವಿದರ ಸಂಘದ ಅಧ್ಯಕ್ಷ ರಬ್ಬನಹಳ್ಳಿ ಡಿ.ಕೆಂಪಣ್ಣ ಮಾತನಾಡಿ, ನಾಟಕ ಕಲೆ ಕಲಿಸುವ ನಿರ್ದೇಶಕರ ಕೊರತೆ ಇದ್ದು, ಹೊಸ ತಲೆಮಾರಿಗೆ ನಾಟಕ ಕಲೆ ಬಗ್ಗೆ ತಿಳಿಸಿ ಅಭಿನಯಿಸುವಂತೆ ಪ್ರೋತ್ಸಾಹಿಸಬೇಕು ಎಂದರು.
 

ಹಿರಿಯ ಕಲಾವಿದರನ್ನು ಅಭಿನಂದಿಸಲಾಯಿತು. ಬೆಂ.ಗ್ರಾ.ಜಿ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ಕಾರ್ಯದರ್ಶಿ ಬಿ.ಟಿ.ಮುನಿರಾಜಯ್ಯ, ಕಲಾವಿದರ ಸಂಘದ ಪ್ರಧಾನ ಕಾರ್ಯದರ್ಶಿ ರಾಮಾಂಜಿನಪ್ಪ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT