ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆ ಅದ್ದೂರಿ ವಾಲ್ಮೀಕಿ ಜಯಂತ್ಯುತ್ಸವ

Last Updated 10 ಅಕ್ಟೋಬರ್ 2011, 7:55 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆಯಿಂದ ಅ. 11ರಂದು ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಿಗ್ಗೆ 10ಗಂಟೆಗೆ ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಕೆ. ರಾಜೇಶ್ವರಿ ಚಾಲನೆ ನೀಡುವರು. ವಿವಿಧ ಜಾನಪದ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ.

ಬೆಳಿಗ್ಗೆ 11.30ಗಂಟೆಗೆ ನಗರದ ಸರ್ಕಾರಿ ಪೇಟೆಪ್ರೈಮರಿ ಶಾಲಾ ಆವರಣದಲ್ಲಿ ವಾಲ್ಮೀಕಿ ಜನ್ಮ ದಿನಾಚರಣೆಯ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಂ.ಪಿ. ರೇಣುಕಾಚಾರ್ಯ ಸಮಾರಂಭದ ಉದ್ಘಾಟನೆ ನೆರವೇರಿಸುವರು. ಸಂಸದ ಆರ್. ಧ್ರುವನಾರಾಯಣ ಅವರು ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಿದ್ದಾರೆ. ಶಾಸಕ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆವಹಿಸಲಿದ್ದಾರೆ.

ಶಾಸಕರಾದ ಎಚ್.ಎಸ್. ಮಹದೇವಪ್ರಸಾದ್, ಆರ್. ನರೇಂದ್ರ, ಪ್ರೊ.ಕೆ.ಆರ್. ಮಲ್ಲಿಕಾರ್ಜುನಪ್ಪ, ಸಂದೇಶ್ ನಾಗರಾಜು, ಮರಿತಿಬ್ಬೇಗೌಡ, ಗೋ. ಮಧುಸೂದನ್, ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಸದಸ್ಯ ಎಂ. ಶಿವಣ್ಣ, ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ಆರ್. ಕೃಷ್ಣಮೂರ್ತಿ, ನಗರಸಭೆ ಅಧ್ಯಕ್ಷೆ  ಭಾಗ್ಯಮ್ಮ, ಜಿ.ಪಂ. ಉಪಾಧ್ಯಕ್ಷ ಎಂ. ಸಿದ್ದರಾಜು, ಚೂಡಾ ಅಧ್ಯಕ್ಷ ಆರ್. ಸುಂದರ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಪದ್ಮಾ ಚಂದ್ರು, ಉಪಾಧ್ಯಕ್ಷ ಪಿ. ಮಹಾಲಿಂಗಸ್ವಾಮಿ, ನಗರಸಭೆ ಉಪಾಧ್ಯಕ್ಷೆ ಸೆಲ್ವಿಬಾಬು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಚಾಮರಾಜನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ಬಂಗಾರನಾಯಕ ಹಾಗೂ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ದೇವರಾಜು ವಾಲ್ಮೀಕಿ ಅವರನ್ನು ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT