ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆ ಚಲನಚಿತ್ರ ಪ್ರದರ್ಶನ ಬಂದ್

Last Updated 21 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಗದಗ:  ಚಲನಚಿತ್ರಗಳ ಪ್ರದರ್ಶನದ ಮೇಲೆ ಕೇಂದ್ರ ಸರ್ಕಾರ ಸೇವಾ ತೆರಿಗೆ ವಿಧಿಸಿರುವುದನ್ನು ವಿರೋಧಿಸಿ ಇದೇ 23ರಂದು ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಪ್ರದರ್ಶನವನ್ನು ಸ್ಥಗಿತಗೊಳಿಸಲಾಗುವುದು ಎಂದು ರಾಜ್ಯ ಚಲನಚಿತ್ರ ಪ್ರದರ್ಶಕರ ಒಕ್ಕೂಟದ ಅಧ್ಯಕ್ಷ ಆರ್.ಆರ್. ಓದುಗೌಡರ ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು ಸಿನಿಮಾ ಪ್ರದರ್ಶನದ ಮೇಲೆ ಶೇ 10.30 ರಷ್ಟು ಸೇವಾ ತೆರಿಗೆ ವಿಧಿಸಿದೆ. ಇದನ್ನು ವಿರೋಧಿಸಿ ಭಾರತೀಯ ಚಲನಚಿತ್ರ ಪ್ರದರ್ಶಕರ ಒಕ್ಕೂಟವು 23ರಂದು ಬಂದ್‌ಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಚಿತ್ರಮಂದಿರಗಳಲ್ಲಿ ಸಹ ಬುಧವಾರ ಪ್ರದರ್ಶನ ಸ್ಥಗಿತಗೊಳಿಸಿ ಬಂದ್‌ಗೆ ಬೆಂಬಲ ಸೂಚಿಸಲಾಗುವುದು ಎಂದು ಅವರು `ಪ್ರಜಾವಾಣಿ~ಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT