ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆ ನೆಟ್ಟಕಲ್ಲಪ್ಪ ರಸ್ತೆ ಓಟ ಸ್ಪರ್ಧೆ

Last Updated 3 ಜೂನ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಡೆಕ್ಕನ್ ಅಥ್ಲೆಟಿಕ್ ಕ್ಲಬ್ ಆಶ್ರಯದ `ಪ್ರಜಾವಾಣಿ~ ಮತ್ತು `ಡೆಕ್ಕನ್ ಹೆರಾಲ್ಡ್~ ಪ್ರಾಯೋಜಿತದಲ್ಲಿ ಕೆ.ಎ. ನೆಟ್ಟಕಲ್ಲಪ್ಪ ಸ್ಮಾರಕ ರಾಜ್ಯ ಮಟ್ಟದ ರಸ್ತೆ ಓಟದ ಸ್ಪರ್ಧೆಗಳು ಭಾನುವಾರ ಹಾಸನದಲ್ಲಿ ಜರುಗಲಿವೆ.

ಹಾಸನದ ಜಿಲ್ಲಾ ಕ್ರೀಡಾಂಗಣದಿಂದ ಬೆಳಿಗ್ಗೆ  6.30ಕ್ಕೆ ಓಟದ ಸ್ಪರ್ಧೆ ಆರಂಭವಾಗಲಿದೆ. ಈ ಸ್ಪರ್ಧೆಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ. ಯಲ್ಲಪ್ಪ ಅವರು ಚಾಲನೆ ನೀಡಲಿದ್ದಾರೆ.

ಸ್ಪರ್ಧೆಯ ವಿವರ: ಪುರುಷರಿಗೆ 12 ಕಿ.ಮೀ.; ಮಹಿಳೆಯರಿಗೆ 6ಕಿ.ಮೀ.  ಬಾಲಕ ಹಾಗೂ ಬಾಲಕಿಯರಿಗೆ (16 ವರ್ಷ ವಯಸ್ಸಿನೊಳಗಿನವರು) 2.5 ಕಿ.ಮೀ. ಸ್ಪರ್ಧೆಗಳು ನಡೆಯಲಿವೆ. ಹಾಸ ನದ ಜಿಲ್ಲಾ ಕ್ರೀಡಾಂಗಣದಲ್ಲಿ ಜೂನ್ 4ರಂದು ಸಂಜೆ 3ಗಂಟೆಯ ಒಳಗಾಗಿ ಸ್ಪರ್ಧಿಗಳು ತಮ್ಮ ಹೆಸರನ್ನು ನೋಂದಾಯಿಸಿ ಸಂಖ್ಯೆಯನ್ನು ಪಡೆದು ಕೊಳ್ಳಬೇಕು.

ಈ ಸ್ಪರ್ಧೆಯು ಒಟ್ಟು 36.600. ಬಹುಮಾನದ ಮೊತ್ತವನ್ನು ಒಳ ಗೊಂಡಿದೆ.

ರಸ್ತೆಯ ಓಟದ ಮಾರ್ಗ: ಹಾಸನ ಜಿಲ್ಲಾ ಕ್ರೀಡಾಂಗಣದಿಂದ ಎಂ.ಜಿ ರೋಡ್, ರಿಂಗ್ ರೋಡ್, ಸಾಲಗಾಮೆ ರಸ್ತೆ, ತವರದೇವರ ಕೊಪ್ಪಳ,  ಡಯಟ್ ಮತ್ತು ಇದೇ ಮಾರ್ಗದಲ್ಲಿ ವಾಪಸ್ ಬಂದು ಜಿಲ್ಲಾ ಕ್ರೀಡಾಂಗಣದಲ್ಲಿ ಕೊನೆಗೊಳ್ಳುವುದು.

ಅಂದು ಸಂಜೆ ನಡೆಯುವ ಬಹುಮಾನ ವಿತರಣಾ ಕಾರ್ಯಕ್ರಮ ದಲ್ಲಿ  ಹಾಸನ ಜಿಲ್ಲಾಧಿಕಾರಿ ಕೆ.ಜಿ. ಜಗದೀಶ್ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಿಂಗ್ ಅವರು ಪಾಲ್ಗೊಳ್ಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT