ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆ ನೈಸ್ ಯೋಜನೆ ವಿರುದ್ಧ ಬಹಿರಂಗ ಸಭೆ, ಜನಾಂದೋಲನ

Last Updated 18 ಡಿಸೆಂಬರ್ 2012, 19:33 IST
ಅಕ್ಷರ ಗಾತ್ರ

ಬೆಂಗಳೂರು: ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್ (ನೈಸ್) ಯೋಜನೆಯಿಂದ ರೈತರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿ ಇದೇ 20ರಂದು ಬೆಳಿಗ್ಗೆ 11ಕ್ಕೆ ಸ್ವಾತಂತ್ರ್ಯ ಉದ್ಯಾನದಲ್ಲಿ ಬಹಿರಂಗ ಸಭೆ ಆಯೋಜಿಸಲಾಗಿದೆ. ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಜನಾಂದೋಲನಕ್ಕೆ ಚಾಲನೆ ನೀಡಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಈ ವಿಷಯ ತಿಳಿಸಿದ ದಲಿತ -ಮುಸ್ಲಿಂ ಸುರಕ್ಷಾ ಸಮಿತಿಯ ಸಲೀಂ ಖಾನ್, ನೈಸ್ ವಿರುದ್ಧ ಹೋರಾಡಿದ ರೈತರ ಮೇಲೆ ಹೂಡಿರುವ ಮೊಕದ್ದಮೆಗಳನ್ನು ಕೂಡಲೇ ಕೈಬಿಡಬೇಕು ಮತ್ತು ಅವರಿಗೆ ಸೂಕ್ತ ಪರಿಹಾರ ನೀಡಬೇಕು ಎಂಬುದೂ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲು ವಿವಿಧ ಸಂಘಟನೆಗಳ ಸಹಯೋಗದಲ್ಲಿ ಜನಾಂದೋಲನ ಹಮ್ಮಿಕೊಳ್ಳಲಾಗಿದೆ ಎಂದರು.

ನೈಸ್ ಯೋಜನೆಗೆ ಅಗತ್ಯ ಇರುವ ಭೂಮಿಯನ್ನು ಕೂಡಲೇ ಗುರುತಿಸಬೇಕು. ಇದರ ವ್ಯಾಪ್ತಿಗೆ ಬರದೇ ಇರುವ ಭೂಮಿಯನ್ನೂ ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ನಡೆದಿದ್ದು, ಅದನ್ನು ತಡೆಯಬೇಕು. ಈಗಾಗಲೇ ವಶಪಡಿಸಿಕೊಂಡಿರುವ ಅಂತಹ ಭೂಮಿಯನ್ನು ಪುನಃ ರೈತರಿಗೇ ಹಸ್ತಾಂತರಿಸಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ, ಸಮತಾ ಸೈನಿಕ ದಳ, ಕರ್ನಾಟಕ ಪ್ರಾಂತ್ಯ ರೈತ ಸಂಘ, ಪ್ರಜಾ ವಿಮೋಚನಾ ಚಳವಳಿ ಸೇರಿದಂತೆ ಹಲವು ಸಂಘಟನೆಗಳು ಆಂದೋಲನದಲ್ಲಿ ಭಾಗವಹಿಸಲಿವೆ ಎಂದು ಅವರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT