ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆ ವಿಶ್ವಕರ್ಮ ಮಹೋತ್ಸವ

Last Updated 16 ಸೆಪ್ಟೆಂಬರ್ 2013, 6:37 IST
ಅಕ್ಷರ ಗಾತ್ರ

ದಾವಣಗೆರೆ: ‘ಜಿಲ್ಲಾ ವಿಶ್ವಕರ್ಮ ಸಮಾಜದ ವತಿಯಿಂದ ಸೆ.17ರಂದು ನಗರದ ಕಾಳಿಕಾದೇವಿ ರಸ್ತೆಯಲ್ಲಿರುವ ಕಾಳಿಕಾಂಬಾ ವಿಶ್ವಕರ್ಮ ಕಲ್ಯಾಣ ಮಂಟಪದಲ್ಲಿ ವಿಶ್ವಕರ್ಮ ಮಹೋತ್ಸವ ಆಯೋಜಿಸಲಾಗಿದೆ’ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಬಿ.ವಿ.ಶಿವಾನಂದ ಹೇಳಿದರು.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 5.30ಕ್ಕೆ ಕಲ್ಯಾಣ ಮಂಟಪದಲ್ಲಿ ವಿಶ್ವಕರ್ಮ ಹೋಮ, ಬೆಳಿಗ್ಗೆ 10ಕ್ಕೆ ವಿಶ್ವಕರ್ಮ ಮೂರ್ತಿ ಮೆರವಣಿಗೆ, ಸ್ತಬ್ಧಚಿತ್ರ ಪ್ರದರ್ಶನ, ಕುಂಭೋತ್ಸವ ನಡೆಯಲಿದೆ. ಮಧ್ಯಾಹ್ನ 1.30ಕ್ಕೆ ಪ್ರಸಾದ ವಿನಿಯೋಗ ನಡೆಯಲಿದೆ.

ಕಾರ್ಯಕ್ರಮವನ್ನು ಶಾಸಕ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಉದ್ಘಾಟಿಸಲಿದ್ದು, ವಿಧಾನ ಪರಿಷತ್‌ ಸದಸ್ಯ ರಘು ಆಚಾರ್‌ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಸಮಾಜದ ಜಿಲ್ಲಾ ಘಟಕದ
ಅಧ್ಯಕ್ಷ ಕೆ.ಪಿ.ಮರಿಯಾಚಾರ್ ಮಾತನಾಡಿ, ವಿಶ್ವಕರ್ಮ ಮಹೋತ್ಸವ ಹಿನ್ನೆಲೆಯಲ್ಲಿ ಸೆ.17ರಂದು ಸರ್ಕಾರಿ ರಜೆ ಘೋಷಣೆ ಮಾಡುವುದು, ಸಮುದಾಯಕ್ಕೆ ಶೇ 3ರಷ್ಟು ಒಳಮೀಸಲಾತಿ ನೀಡುವುದು, ದಾವಣಗೆರೆ ಮಹಾನಗರ ವ್ಯಾಪ್ತಿಯಲ್ಲಿ ಮಹಿಳಾ ವಿದ್ಯಾರ್ಥಿನಿಲಯ ಸ್ಥಾಪನೆಗೆ ನಿವೇಶನ ಮಂಜೂರು ಮಾಡುವುದು, ಸಮುದಾಯದ ವೃತ್ತಿ ತರಬೇತಿ ಕೇಂದ್ರಗಳನ್ನು ಸ್ಥಾಪಿಸುವುದು, ಜಿಲ್ಲೆಯಲ್ಲಿ ವಿಶ್ವಕರ್ಮ ಮಠ ಸ್ಥಾಪಿಸಲು ಐದು ಎಕರೆ ಜಮೀನು ಮಂಜೂರು ಮಾಡುವುದು, ರಾಜಕೀಯ ಪ್ರಾತಿನಿಧ್ಯ ಸೇರಿದಂತೆ 15 ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಸಮಾಜದ ಮುಖಂಡರಾದ ಬಸಾಪುರದ ನಾಗೇಂದ್ರಾಚಾರ್‌, ಕೊಟ್ರೇಶ್‌, ಬೇತೂರ್‌ ಮಂಜುನಾಥ್‌, ಜಕಣಾಚಾರ್‌, ವೀರಾಚಾರ್‌, ಎ.ಆರ್‌. ವೀರಭದ್ರಾಚಾರ್‌ ಉಪಸ್ಥಿತರಿದ್ದರು.

ಅರ್ಜಿ ಆಹ್ವಾನ
ಚನ್ನಗಿರಿ: ತಾಲ್ಲೂಕು ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ 2012–13 ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯು ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭವನ್ನು ತಾಲ್ಲೂಕಿನ ಕೆಂಗಾಪುರ ಗ್ರಾಮದ ರಾಮಲಿಂಗೇಶ್ವರ ಮಠದಲ್ಲಿ ಸೆ.22ರಂದು ಹಮ್ಮಿಕೊಳ್ಳಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊ: 95384 18129 ಹಾಗೂ 72045 71110 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT