ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆಯಿಂದ ದಸರಾ ಕ್ರೀಡಾಕೂಟ

Last Updated 20 ಅಕ್ಟೋಬರ್ 2012, 6:00 IST
ಅಕ್ಷರ ಗಾತ್ರ

ಮಡಿಕೇರಿ: ದಸರಾ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಅ.21 ಮತ್ತು 22 ರಂದು ನಗರದಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಕ್ರೀಡಾ ಸಮಿತಿ ಅಧ್ಯಕ್ಷ ಎ.ಸಿ.ಚುಮ್ಮಿ ದೇವಯ್ಯ ತಿಳಿಸಿದರು.

ನಗರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.21 ರಂದು ಬೆಳಿಗ್ಗೆ 7 ಗಂಟೆಗೆ ನಗರದ ವಿಜಯ ವಿನಾಯಕ ದೇವಾಲಯ ರಸ್ತೆಯಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಪುರುಷರಿಗೆ ಮತ್ತು ಮಹಿಳೆಯರ ಓಟದ ಸ್ಪರ್ಧೆ ನಡೆಯಲಿದೆ ಎಂದು ತಿಳಿಸಿದರು.

ಅಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಥ್ರೋ ಬಾಲ್ ಸ್ಪರ್ಧೆ ಹಾಗೂ ಬಾಲಕರಿಗೆ ಕಬಡ್ಡಿ ಸ್ಪರ್ಧೆ ನಡೆಯಲಿದೆ ಎಂದರು. ಫುಟ್ ಬಾಲ್ ಪಂದ್ಯಾಟ ಹಾಗೂ ಪುರುಷರಿಗೆ ಮುಕ್ತ ವಾಲಿಬಾಲ್ ಮತ್ತು ಮಹಿಳೆಯರಿಗೆ ಮುಕ್ತ ಥ್ರೋ ಬಾಲ್ ಸ್ಪರ್ಧೆ ನಡೆಯಲಿದೆ ಎಂದರು.

ಅ.22 ರಂದು ಚೌಡೇಶ್ವರಿ ದೇವಾಲಯದಿಂದ ಬೆಳಿಗ್ಗೆ 9.30ಕ್ಕೆ ಕ್ರೀಡಾಜ್ಯೋತಿಯನ್ನು ಮೆರವಣಿಗೆಯಲ್ಲಿ ತಂದ ಬಳಿಕ ಪಂದ್ಯಾವಳಿಯನ್ನು  ಅಂತರರಾಷ್ಟ್ರೀಯ ಹಾಕಿ ಆಟಗಾರ ಪೂಣಚ್ಚ ಅವರು ಜಿಲ್ಲಾ ಕ್ರೀಡಾಂಗಣದಲ್ಲಿ ಉದ್ಘಾಟಿಸುವರು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ದಸರಾ ಸಮಿತಿಯ ಅಧ್ಯಕ್ಷರೂ ಆಗಿರುವ ನಗರಸಭೆ ಅಧ್ಯಕ್ಷ ಎಚ್.ಎಂ. ನಂದಕಮಾರ್ ಹಾಗೂ ದಸರಾ ಸಮಿತಿಯ ಕಾರ್ಯಾಧ್ಯಕ್ಷ ರಾಬೀನ್ ದೇವಯ್ಯ ಹಾಗೂ ಇತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಉದ್ಘಾಟನಾ ಕಾರ್ಯಕ್ರಮದ ಬಳಿಕ ಮಕ್ಕಳಿಗೆ ಕಪ್ಪೆ ಜಿಗಿತ ಹಾಗೂ ಓಟದ ಸ್ಪರ್ಧೆ ಏರ್ಪಡಿಸಿರುವುದಾಗಿ ತಿಳಿಸಿದರು.

ಹಿರಿಯ ನಾಗರಿಕರಿಗೆ 100 ಮೀಟರ್ ನಡಿಗೆ ಸ್ಪರ್ಧೆ, ಮಹಿಳೆಯರಿಗೆ ಸಂಗೀತ ಕುರ್ಚಿ ಹಾಗೂ ಹಗ್ಗ ಜಗ್ಗಾಟ, ತೆಂಗಿನ ಕಾಯಿಗೆ ಗುಂಡು ಹೊಡೆಯುವ ಪಂದ್ಯಾಟವನ್ನು ಏರ್ಪಡಿಸಿರುವುದಾಗಿ ತಿಳಿಸಿದರು. ಕ್ರೀಡಾಕೂಟದಲ್ಲಿ ಜಿಲ್ಲಾಧಿಕಾರಿಗಳ ತಂಡ, ಪೊಲೀಸರ ತಂಡ, ನಗರಸಭೆ ಸದಸ್ಯರ ತಂಡ, ಶಿಕ್ಷಕರ ತಂಡ, ಪುರಸಭೆ ನೌಕರರ ತಂಡ, ಪತ್ರಕರ್ತರ ತಂಡ ಸೇರಿದಂತೆ ಇತರ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಲಿರುವುದಾಗಿ ಅವರು ತಿಳಿಸಿದರು.

ಸ್ಪರ್ಧೆಯ ವಿಜೇತರಿಗೆ ಯಾವುದೇ ನಗದು ಬಹಮಾನ ಇಲ್ಲ. ವಿಜೇತರಿಗೆ ಟ್ರೋಫಿ ನೀಡಲಾಗವುದು ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸಮಿತಿ ಉಪಾಧ್ಯಕ್ಷರೂ, ನಗರಸಭಾ ಸದಸ್ಯರೂ ಆದ ಕೆ.ಯು.ಅಶ್ರಫ್, ಸುನೀಲ್ ನಂಜಪ್ಪ, ಪ್ರಧಾನ ಕಾರ್ಯದರ್ಶಿ ಕಿಶನ್ ಪೂವಯ್ಯ ಹಾಗೂ ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT