ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಟ್ಟೆ: ಪಿ.ಯು ಬ್ಯಾಡ್ಮಿಂಟನ್ ಉದ್ಘಾಟನೆ

Last Updated 4 ಅಕ್ಟೋಬರ್ 2011, 8:35 IST
ಅಕ್ಷರ ಗಾತ್ರ

ಕಾರ್ಕಳ: ತಾಲ್ಲೂಕಿನ ನಿಟ್ಟೆ ಡಾ.ಎನ್.ಎಸ್.ಎ.ಎಂ. ಪದವಿ ಪೂರ್ವ ಕಾಲೇಜು ಹಾಗೂ ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಭಾನುವಾರ ನಿಟ್ಟೆ ವಿದ್ಯಾಸಂಸ್ಥೆಯ ಬಿ.ಸಿ.ಆಳ್ವ ಸ್ಮಾರಕ ಒಳ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಪದವಿ ಪೂರ್ವ ವಿಭಾಗದ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ರಾಜ್ಯ ಸರ್ಕಾರದ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷ ಗಣೇಶ್ ಕಾರ್ಣಿಕ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು `ಈ ಕ್ರೀಡಾಕೂಟವು ಸ್ಪರ್ಧಾಳುಗಳಿಗೆ ರಾಷ್ಟ್ರಮಟ್ಟದಲ್ಲಿ  ಸಾಧನೆ ಮಾಡುವ ಕನಸನ್ನು ಮೂಡಲಿ. ರಾಜ್ಯದ ವಿದ್ಯಾರ್ಥಿಗಳಿಂದ ಉತ್ತಮ ಸಾಧನೆ ಮೂಡಿ ಬರಲಿ~ ಎಂದು ಹಾರೈಸಿದರು.

ಅಧ್ಯಕ್ಷತೆ ವಹಿಸಿದ ಜಸ್ಟಿಸ್ ಕೆಎಸ್ ಹೆಗ್ಡೆ ಮ್ಯಾನೇಜ್‌ಮೆಂಟ್ ಕಾಲೇಜಿನ ನಿರ್ದೇಶಕ ಎವಿಎಂ ರಮೇಶ್ ಕಾರ್ಣಿಕ್ ಮಾತನಾಡಿ, `ಸೋಲು ಗೆಲುವುಗಳನ್ನು ಕ್ರೀಡಾ ಸ್ಫೂರ್ತಿಯಿಂದ ಸ್ವೀಕರಿಸಿ~ ಎಂದರು.

ನಿಟ್ಟೆ ಡಾ.ಎನ್.ಎಸ್.ಎ.ಎಂ. ಪದವಿ ಪೂರ್ವ ಕಾಲೇಜು ಸಂಸ್ಥೆಯ ಪ್ರಾಂಶುಪಾಲರಾದ ಇಂದಿರಾ ಕೆ, ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖಾ ಉಪನಿರ್ದೇಶಕ ಎಸ್.ಎಸ್.ಶಿಂಧಾ, ವಿದ್ಯಾರ್ಥಿ ನಿಖಿಲ್, ದೈಹಿಕ ಶಿಕ್ಷಣ ಉಪನ್ಯಾಸಕ ರವೀಂದ್ರ ಕುಮಾರ್, ಇಲಾಖಾ ಕ್ರೀಡಾ ಮೇಲ್ವಿಚಾರಕ ವಿಶ್ವನಾಥ ಬಾಯಿರಿ,   ನಿಟ್ಟೆ ವಿದ್ಯಾಸಂಸ್ಥೆಯ ಕುಲಸಚಿವ ಯೋಗೀಶ ಹೆಗ್ಡೆ, ರಾಜ್ಯ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಕುಮಾರ್ ಎ, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ನಾಗರಾಜ ಶೆಟ್ಟಿ ಮೊದಲಾದವರು ಇದ್ದರು. ಪಂದ್ಯಾವಳಿಯಲ್ಲಿ ರಾಜ್ಯದಾದ್ಯಂತ ಹುಡುಗರ 30 ತಂಡ ಹಾಗೂ ಹುಡುಗಿಯರ 28 ತಂಡಗಳು ಭಾಗವಹಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT