ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿತ್ಯಾನಂದ ಸೇರಿ 18 ಮಂದಿ ವಿರುದ್ಧ ದೂರು

Last Updated 14 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: `ನನ್ನ ವೈಯಕ್ತಿಕ ಜೀವನದ ಬಹಿರಂಗ ಚರ್ಚೆ ಮಾಡುವ ಮೂಲಕ ನನ್ನ ಗೌರವಕ್ಕೆ ಧಕ್ಕೆ ತಂದಿದ್ದಾರೆ~ ಎಂದು ಆರೋಪಿಸಿ ಆರತಿರಾವ್ ಬಿಡದಿಯ ನಿತ್ಯಾನಂದ ಸ್ವಾಮೀಜಿ ಹಾಗೂ ಖಾಸಗಿ ಸುದ್ದಿ ವಾಹಿನಿಯೊಂದರ ಸಿಬ್ಬಂದಿ ಸೇರಿದಂತೆ 18 ಮಂದಿ ವಿರುದ್ಧ ನಗರದ ಹೆಣ್ಣೂರು ಠಾಣೆಯಲ್ಲಿ ಶನಿವಾರ ದೂರು ದಾಖಲಿಸಿದ್ದಾರೆ.

`ನಿತ್ಯಾನಂದ ಸ್ವಾಮೀಜಿ ನನ್ನ ಆರೋಗ್ಯಕ್ಕೆ ಸಂಬಂಧಿಸಿದ ಸುಳ್ಳು ದಾಖಲೆಗಳನ್ನು ಮುಂದಿಟ್ಟುಕೊಂಡು ಅಪಪ್ರಚಾರ ಮಾಡುತ್ತಿದ್ದಾರೆ. ಇದರಿಂದ ನನ್ನ ಗೌರವಕ್ಕೆ ಧಕ್ಕೆಯಾಗಿದೆ~ ಎಂದು ಆರತಿ ರಾವ್ ದೂರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಹೆಣ್ಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT