ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಯಂತ್ರಣಕ್ಕೆ ನಿಯಮ

Last Updated 7 ಫೆಬ್ರುವರಿ 2011, 18:30 IST
ಅಕ್ಷರ ಗಾತ್ರ

ನವದೆಹಲಿ: ದಿನಸಿ ಸಾಮಾನು, ಹಣ್ಣು ತರಕಾರಿ ಖರೀದಿಸುವ ಗ್ರಾಹಕರು ಇನ್ನು ಮುಂದೆ ಪ್ಲಾಸ್ಟಿಕ್ ಬ್ಯಾಗ್‌ಗಳಿಗೆ ಹಣ ಪಾವತಿಸುವುದು ಕಡ್ಡಾಯ.

ಪ್ಲಾಸ್ಟಿಕ್ ತ್ಯಾಜ್ಯ (ವ್ಯವಸ್ಥೆ ಮತ್ತು ನಿರ್ವಹಣೆ) ನಿಯಮ 2011ನ್ನು ಕೇಂದ್ರ ಸರ್ಕಾರ ಅಧಿಸೂಚನೆಯ ಮೂಲಕ ಪ್ರಚುರಪಡಿಸಿದ್ದು, ಇನ್ನು ಮುಂದೆ ವ್ಯಾಪಾರಸ್ಥರು ಗ್ರಾಹಕರಿಗೆ ಪ್ಲಾಸ್ಟಿಕ್ ಚೀಲಗಳನ್ನು ಉಚಿತವಾಗಿ ನೀಡುವಂತಿಲ್ಲ ಎಂದು ತಿಳಿಸಿದೆ. ಪ್ಲಾಸ್ಟಿಕ್ ಚೀಲಗಳ ಮಾರಾಟದಿಂದ ಬಂದ ಹಣವನ್ನು ಸ್ಥಳಿಯಾಡಳಿತಕ್ಕೆ ನೀಡಲು ಈ ನಿಯಮದಲ್ಲಿ ಅವಕಾಶ ನೀಡಲಾಗಿದೆ.

ಬೇಕಾಬಿಟ್ಟಿ ಪ್ಲಾಸ್ಟಿಕ್ ಬಳಸಿ ಬೀಸಾಡುವುದರಿಂದ ಒಳಚರಂಡಿ ಕಟ್ಟಿಕೊಳ್ಳುವುದರ ಜತೆಗೆ  ಪರಿಸರಕ್ಕೆ ಹಾನಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಪರಿಸರ ಇಲಾಖೆ ಪ್ಲಾಸ್ಟಿಕ್ ಚೀಲಗಳ ಬಳಕೆ ನಿಯಂತ್ರಣಕ್ಕೆ ಹೊಸ ನಿಯಮ ರೂಪಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT