ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರಂತರ ಹೋರಾಟದ ಜಾರ್ಜ್ ಫರ್ನಾಂಡಿಸ್‌

Last Updated 10 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

ಕರ್ನಾಟಕದ ಮಂಗಳೂರಿನಲ್ಲಿ 1930ರಲ್ಲಿ ರೋಮನ್‌ ಕ್ಯಾಥೋ­ಲಿಕ್‌ ಕುಟುಂಬದಲ್ಲಿ ಜಾರ್ಜ್ ಫರ್ನಾಂಡಿಸ್ ಜನಿಸಿದರು. ಇವರು ಕಾರ್ಮಿಕ ಸಂಘಟನೆಯ ನೇತಾರ, ಕೃಷಿಕ, ಸಾಮಾಜಿಕ ಕಾರ್ಯಕರ್ತ ಮತ್ತು ಪತ್ರಕರ್ತರಾಗಿದ್ದ ಅಪರೂಪದ ಸಂಸದ.

ಕ್ರಮವಾಗಿ ಜಾರ್ಜ್‌ ಅವರು 4, 6, 7 9, 10, 11, 12, 13, 14ನೇ ಲೋಕಸಭೆಗೆ ಮತ್ತು 2009ರಲ್ಲಿ ರಾಜ್ಯಸಭೆ ಪ್ರವೇಶಿಸಿದ್ದರು.
ಅವರು ಕಾರ್ಮಿಕ ಪರ ಹೋರಾಟ­ಗಳಲ್ಲಿ ಭಾಗವಹಿಸಿ­ದರು, ಡಾ.­ಲೋಹಿ­ಯಾ ಅವರ ಪ್ರಭಾವಕ್ಕೆ ಒಳಗಾಗಿ ಸಮಾಜವಾದಿಯಾದರು.
ಉದ್ಯೋಗ ಅರಸಿ ಮುಂಬೈ­ಗೆ ತೆರಳಿದ ಅವರು ಅನೇಕ ಹೋರಾಟಗಳಲ್ಲಿ ಭಾಗ­ವಹಿಸಿದರು.

ಸಂಯುಕ್ತ ಸಮಾಜವಾದಿ ಪಕ್ಷದಿಂದ ಲೋಕಸಭೆಗೆ ಸ್ಪರ್ಧಿಸಿ ಕಾಂಗ್ರೆಸ್‌ನ ಎಸ್.ಕೆ.ಪಾಟೀಲ್‌ ಅವರನ್ನು ಸೋಲಿಸಿ ‘ಜೈಂಟ್‌ ಕಿಲ್ಲರ್‌’ (ದೈತ್ಯ ಸಂಹಾರಕ) ಎಂದು ಪ್ರಸಿದ್ಧರಾದರು. ೧೯೬೯ರಲ್ಲಿ ಇವರು ಸಂಯುಕ್ತ ಸಮಾಜವಾದಿ ಪಕ್ಷದ ಪ್ರಧಾನಕಾರ್ಯದರ್ಶಿ­ಯಾದರು.

ಜನತಾ ದಳದ ಹಿರಿಯ ಸದಸ್ಯರಾಗಿದ್ದ ಅವರು ಮುಂದೆ ಸಮತಾ ಪಕ್ಷ ಸ್ಥಾಪಿಸಿದರು. ಅಖಿಲ ಭಾರತ ರೈಲ್ವೆ ಫೆಡರೇಷ­ನ್‌ನ ಮುಖಂಡ­ರಾಗಿ ೧೯೭೪ರಲ್ಲಿ ಅವರು ಸಂಘಟಿಸಿದ ಮುಷ್ಕರ ತೀವ್ರತರ­ವಾಗಿದ್ದು ಇಂದಿರಾ ಗಾಂಧಿ ಅವರ ಸರ್ಕಾ­ರಕ್ಕೆ ಸವಾಲಾಗಿ ಪರಿಣಮಿಸಿತು. ಈ ಹಿನ್ನೆಲೆಯಲ್ಲಿ ಇಂದಿರಾ ಅವರು ದೇಶದಲ್ಲಿ ಆಂತರಿಕ ತುರ್ತು ಪರಿಸ್ಥಿತಿ ಘೋಷಿಸಿ ಇವರನ್ನು ಬಂಧಿಸಿದರು. ೧೯೭೭ರಲ್ಲಿ ನಡೆದ
ಮಹಾಚುನಾವಣೆ­ಯಲ್ಲಿ ಜಾರ್ಜ್‌ ಅವರು ಬಿಹಾರದ ಮುಜಫರ್‌ನ­ಗರದಿಂದ ಸ್ಪರ್ಧಿಸಿ ೩ ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿ ಕೇಂದ್ರ ಮಂತ್ರಿಯಾದರು.

ಆ ಸಮಯ­ದಲ್ಲಿ ಜಾರ್ಜ್‌ ಅವರು ವಿದೇಶಿ ವಿನಿ­ಮಯ ನಿಯಂತ್ರಣ ಕಾಯ್ದೆಯನ್ನು ಕಟ್ಟು­ನಿಟ್ಟಾಗಿ ಜಾರಿಗೆ ತಂದಾಗ ಬಹು­ರಾಷ್ಟ್ರೀಯ ಕಂಪೆನಿಗಳಾದ ಐಬಿಎಂ ಮತ್ತು ಕೋಕಾಕೋಲ ಭಾರತದಿಂದ ಕಾಲ್ತೆಗೆದವು. ವಿ.ಪಿ.ಸಿಂಗ್‌ ಅವರ ಸರ್ಕಾರ­ದಲ್ಲಿ ರೈಲ್ವೆ ಮಂತ್ರಿಯಾಗಿದ್ದ ಇವರು ಕೊಂಕಣ ರೈಲ್ವೆ ಯೋಜನೆಗೆ ಜೀವ ಕೊಟ್ಟರು. ಎನ್‌ಡಿಎ ಸರ್ಕಾರದ ಅವಧಿಯಲ್ಲಿ ರಕ್ಷಣಾಮಂತ್ರಿಯಾ­ಗಿದ್ದರು. ಪ್ರಖರ ಭಾಷಣಗಳಿಗೆ ಹೆಸರಾಗಿ­ರುವ ಇವರನ್ನು ಬುದ್ಧಿ ಜೀವಿ ಮತ್ತು ರಾಜಕಾರಣಿಯ ಸಂಗಮ ಎನ್ನಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT