ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರಾಣಿ ವಿರುದ್ಧದ ದೂರು ತನಿಖೆಗೆ ಗಡುವು ವಿಸ್ತರಣೆ

Last Updated 13 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ವಿರುದ್ಧ ಉದ್ಯಮಿ ಆಲಂ ಪಾಷಾ ಸಲ್ಲಿಸಿರುವ ಖಾಸಗಿ ದೂರಿನಲ್ಲಿರುವ ಆರೋಪಗಳ ಕುರಿತ ತನಿಖೆಯನ್ನು ಪೂರ್ಣಗೊಳಿಸಿ ಅಂತಿಮ ವರದಿ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ನೀಡಿದ್ದ ಗಡುವನ್ನು ಜನವರಿ 31ರವರೆಗೆ ವಿಸ್ತರಿಸಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ಶುಕ್ರವಾರ ಆದೇಶ ಹೊರಡಿಸಿದೆ.

ಪಾಷಾ ಸಲ್ಲಿಸಿರುವ ದೂರಿನಲ್ಲಿರುವ ಆರೋಪಗಳ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸಲು ಗುರುವಾರದವರೆಗೆ ಕಾಲಾವಕಾಶ ನೀಡಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ (ಲೋಕಾಯುಕ್ತ) ವಿಶೇಷ ನ್ಯಾಯಾಲಯ ಈ ಹಿಂದೆ ಆದೇಶ ಹೊರಡಿಸಿತ್ತು. ಆದರೆ, ಗುರುವಾರ ನ್ಯಾಯಾಲಯಕ್ಕೆ ಹಾಜರಾದ ಲೋಕಾಯುಕ್ತ ಡಿವೈಎಸ್‌ಪಿ ಎಚ್.ಎಸ್.ಮಂಜುನಾಥ್ ಅವರು ತನಿಖೆಯ ಪ್ರಗತಿ ಕುರಿತು ವಿವರ ನೀಡಿದರು. ತನಿಖೆ ಪೂರ್ಣಗೊಳಿಸಲು ಹೆಚ್ಚಿನ ಕಾಲಾವಕಾಶ ನೀಡುವಂತೆಯೂ ಮನವಿ ಮಾಡಿದರು. ಇನ್ನೂ ಕೆಲ ಸ್ಥಳಗಳಿಗೆ ತನಿಖೆಗಾಗಿ ಭೇಟಿ ನೀಡಬೇಕಿರುವ ಹಿನ್ನೆಲೆಯಲ್ಲಿ ಕಾಲಾವಕಾಶ ಅಗತ್ಯವಿದೆ ಎಂದು ತನಿಖಾಧಿಕಾರಿ ನ್ಯಾಯಾಲಯಕ್ಕೆ ವಿವರಿಸಿದರು. ಅವರ ಬೇಡಿಕೆಯನ್ನು ಮಾನ್ಯ ಮಾಡಿದ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಅವರು, ಜ.31ರವರೆಗೆ ಗಡುವು ವಿಸ್ತರಿಸಿ ಆದೇಶ ಹೊರಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT