ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರಾಸೆಯಾಗಿದೆ: ಮೈಕ್ ಹಸ್ಸಿ

Last Updated 9 ಫೆಬ್ರುವರಿ 2011, 18:30 IST
ಅಕ್ಷರ ಗಾತ್ರ

ಮೆಲ್ಬರ್ನ್ (ಪಿಟಿಐ): ವಿಶ್ವಕಪ್ ಟೂರ್ನಿಯಲ್ಲಿ ಆಡುವ ಅವಕಾಶ ಕಳೆದುಕೊಂಡದ್ದು ನಿರಾಸೆಯ ವಿಚಾರ ಎಂದು ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಆಟಗಾರ ಮೈಕ್ ಹಸ್ಸಿ ಹೇಳಿದ್ದಾರೆ.

ಅದೇ ರೀತಿ ಗಾಯದಿಂದ ಚೇತರಿಸಿಕೊಳ್ಳಲು ಹೆಚ್ಚಿನ ಕಾಲಾವಕಾಶ ನೀಡದ ಕ್ರಿಕೆಟ್ ಆಸ್ಟ್ರೇಲಿಯಾದ (ಸಿಎ) ಕ್ರಮದ ಬಗ್ಗೆ ಅವರು ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಹಸ್ಸಿ ಟೂರ್ನಿಗೆ ಮುನ್ನ ಫಿಟ್‌ನೆಸ್ ಪಡೆಯುವರೇ ಎಂಬುದನ್ನು ಕಾದು ನೋಡದ ಸಿಎ ರಾಷ್ಟ್ರೀಯ ಆಯ್ಕೆ ಸಮಿತಿ ಮಂಗಳವಾರ ಬದಲಿ ಆಟಗಾರನನ್ನು ಹೆಸರಿಸಿತ್ತು. ಕಾಲಮ್ ಫರ್ಗ್ಯುಸನ್ ಅವರು ಹಸ್ಸಿ ಬದಲು 15 ಸದಸ್ಯರ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಇಂಗ್ಲೆಂಡ್ ವಿರುದ್ಧ ತವರಿನಲ್ಲಿ ಇತ್ತೀಚೆಗೆ ನಡೆದ ಏಕದಿನ ಕ್ರಿಕೆಟ್ ಸರಣಿಯ ವೇಳೆ ಹಸ್ಸಿ ತೊಡೆಯ ಗಾಯಕ್ಕೆ ಒಳಗಾಗಿದ್ದರು. ಆದರೆ ಗಾಯದಿಂದ ಚೇತರಿಸಿಕೊಂಡು ವಿಶ್ವಕಪ್‌ನಲ್ಲಿ ಆಡುವ ವಿಶ್ವಾಸದಲ್ಲಿ ಅವರು ಇದ್ದರು.

ಸಿಎಯ ನಿರ್ಧಾರ ನಿರಾಸೆ ಉಂಟುಮಾಡಿದೆ ಎಂದು ಈ ಎಡಗೈ ಬ್ಯಾಟ್ಸ್‌ಮನ್ ನುಡಿದರು. ‘ನನಗೆ ನಿರಾಸೆ ಮಾತ್ರವಲ್ಲ ಅಲ್ಪ ಆಘಾತವೂ ಆಗಿದೆ’ ಎಂದರು. ‘ವಿಶ್ವಕಪ್‌ನಲ್ಲಿ ಆಸೀಸ್ ತಂಡದ ಎರಡನೇ ಪಂದ್ಯದ ವೇಳೆಗೆ ಸಂಪೂರ್ಣ ಚೇತರಿಸಿಕೊಳ್ಳುವ ವಿಶ್ವಾಸವಿತ್ತು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT