ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದಕ್ಕೆ

Last Updated 17 ಮೇ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅವರ ಪುತ್ರರು ಮತ್ತು ಅಳಿಯ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಮೇ 21ಕ್ಕೆ ಮುಂದೂಡಿ ಸೆಷನ್ಸ್ ನ್ಯಾಯಾಲಯ ಗುರುವಾರ ಆದೇಶ ಹೊರಡಿಸಿದೆ. ಅರ್ಜಿಯ ಮುಂದಿನ ವಿಚಾರಣೆಯನ್ನು ಸಿಬಿಐ ವಿಶೇಷ ನ್ಯಾಯಾಲಯ ನಡೆಸಲಿದೆ.

ಜಿಂದಾಲ್ ಸಮೂಹದ ಸೌತ್‌ವೆಸ್ಟ್ ಮೈನಿಂಗ್ ಕಂಪೆನಿಯಿಂದ ಸಂಶಯಾಸ್ಪದ ರೀತಿಯಲ್ಲಿ ಹಣ ಪಡೆದಿರುವ ಆರೋಪದ ಮೇಲೆ ಸಿಬಿಐ ಯಡಿಯೂರಪ್ಪ ಸೇರಿದಂತೆ ಹಲವರ ವಿರುದ್ಧ ಮಂಗಳವಾರ ಪ್ರಥಮ ಮಾಹಿತಿ ವರದಿ ದಾಖಲಿಸಿತ್ತು. ಬುಧವಾರ ವಿವಿಧೆಡೆ ಸಿಬಿಐ ದಾಳಿ ನಡೆದಿತ್ತು.
 
ಬುಧವಾರವೇ ಯಡಿಯೂರಪ್ಪ, ಅವರ ಪುತ್ರರಾದ ಬಿ.ವೈ.ವಿಜಯೇಂದ್ರ, ಬಿ.ವೈ.ರಾಘವೇಂದ್ರ ಮತ್ತು ಅಳಿಯ ಆರ್.ಎನ್.ಸೋಹನ್‌ಕುಮಾರ್ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ಎಂಟನೇ ಆರೋಪಿಯಾಗಿರುವ ಶಾಸಕ ಎಸ್.ಎನ್.ಕೃಷ್ಣಯ್ಯ ಶೆಟ್ಟಿ ನಿರೀಕ್ಷಣಾ ಜಾಮೀನು ಕೋರಿ ಗುರುವಾರ ಅರ್ಜಿ ಸಲ್ಲಿಸಿದರು.

ಸೆಷನ್ಸ್ ನ್ಯಾಯಾಧೀಶ ಶಿವಲಿಂಗೇಗೌಡ ಅವರು ಗುರುವಾರ ವಿಚಾರಣೆ ಆರಂಭಿಸುತ್ತಿದ್ದಂತೆ, ಆಕ್ಷೇಪಣೆ ಸಲ್ಲಿಸಲು ತಮಗೆ ಇನ್ನೂ ಹೆಚ್ಚಿನ ಕಾಲಾವಕಾಶ ಬೇಕು ಎಂದು ಸಿಬಿಐ ಪರ ವಕೀಲರು ಕೋರಿದರು. `ಇಂತಹ ಪ್ರಕರಣಗಳಲ್ಲಿ ಜಾಮೀನು ಅರ್ಜಿಗಳ ವಿಚಾರಣೆಯನ್ನು ಸಿಬಿಐ ವಿಶೇಷ ನ್ಯಾಯಾಲಯವೇ ನಡೆಸಬೇಕು. ರಜಾ ಕಾಲದ ಪ್ರಭಾರಿ ನ್ಯಾಯಾಲಯ ವಿಚಾರಣೆ ನಡಸುವುದು ಸೂಕ್ತವಲ್ಲ. ಆದ್ದರಿಂದ ಅರ್ಜಿಯ ವಿಚಾರಣೆಯನ್ನು ಮುಂದೂಡಬೇಕು~ ಎಂದು ಕೋರಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಮೋಹನ್ ಪರಾಶರನ್ ಮನವಿ ಸಲ್ಲಿಸಿದರು.
 
ಹೆಚ್ಚುವರಿ ಸಾಲಿಸಿಟರ್ ಜನರಲ್ ಅವರ ಕೋರಿಕೆಯನ್ನು ಮಾನ್ಯ ಮಾಡಿದ ನ್ಯಾಯಾಧೀಶರು, ಅರ್ಜಿಯ ವಿಚಾರಣೆಯನ್ನು ಮೇ 25ಕ್ಕೆ ಮುಂದೂಡಿದರು. ಸಿಬಿಐ ವಿಶೇಷ ನ್ಯಾಯಾಲಯವೇ ಮುಂದೆ ಅರ್ಜಿಯ ವಿಚಾರಣೆ ನಡೆಸಲಿದ್ದು, ಅಲ್ಲಿಯೇ ವಿಚಾರಣೆಗೆ ಹಾಜರಾಗಬೇಕು ಎಂದು ಅರ್ಜಿದಾರರಿಗೆ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT