ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಿನ ಸಮಸ್ಯೆ ಬಗೆಹರಿಸಲು ಸೂಚನೆ

Last Updated 9 ಜನವರಿ 2012, 19:30 IST
ಅಕ್ಷರ ಗಾತ್ರ

ಬೀದರ್: ತಾಲ್ಲೂಕಿನಲ್ಲಿ ಉದ್ಭವಿಸಿರುವ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಶಾಸಕ ಬಂಡೆಪ್ಪ ಕಾಶೆಂಪೂರ್ ಅಧಿಕಾರಿಗಳಿಗೆ ಸೂಚಿಸಿದರು.

ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಸೋಮವಾರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಬೀದರ್ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಕುಡಿಯುವ ನೀರು, ಉದ್ಯೋಗ ಮತ್ತು ಜಾನುವಾರುಗಳಿಗೆ ಮೇವು  ಒದಗಿಸುವ ಕೆಲಸ ತ್ವರಿತ ಗತಿಯಲ್ಲಿ ನಡೆಯಬೇಕಿತ್ತು. ಆದರೆ,  ಯಾವುದೇ ಕೆಲಸಗಳು ನಡೆದಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ತಾಲ್ಲೂಕಿನ ಯಾವ ಯಾವ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದೆ. ಇದನ್ನು ಪರಿಹರಿಸುವುದಕ್ಕಾಗಿ ಏನೇನು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಶಾಸಕರು ಅಧಿಕಾರಿಗಳನ್ನು ಪ್ರಶ್ನಿಸಿದರು. ಆಗ ಅಧಿಕಾರಿಯೊಬ್ಬರು ನೀರಿನ ಸಮಸ್ಯೆ ಕುರಿತು ಯಾವುದೇ ದೂರು ಬಂದಿಲ್ಲ. ಹೀಗಾಗಿ ಎಲ್ಲೂ ಸಮಸ್ಯೆ ಇಲ್ಲ ಎಂದು ಉತ್ತರಿಸಿದರು.

ಸಿಟ್ಟಿಗೆದ್ದ ಶಾಸಕರು `ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ 80 ಗ್ರಾಮಗಳಿವೆ. ಎಲ್ಲೂ ಸಮಸ್ಯೆ ಇರದೇ ಇರಲು ಹೇಗೆ ಸಾಧ್ಯ?~ ಎಂದು ಪ್ರಶ್ನಿಸಿದರು. ತಕ್ಷಣ ದೂರವಾಣಿ ಮೂಲಕ 8-10 ಗ್ರಾಮಗಳ ಜನರನ್ನು ಸಂಪರ್ಕಿಸಿದರು.

ಬಹುತೇಕ ಗ್ರಾಮಸ್ಥರು ಸಮಸ್ಯೆ ತಿಳಿಸಿದರು. ಆಗ ಶಾಸಕರು ನೀವು ಹಳ್ಳಿಗೇ ಹೋಗುವುದಿಲ್ಲ. ಹಾಗಾದರೆ ಸಮಸ್ಯೆ ಗೊತ್ತಾಗುವುದಾದರೂ ಹೇಗೆ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಬೇಸಿಗೆ ಒಳಗೆ ನೀರಿನ ಸಮಸ್ಯೆ ಬಗೆಹರಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ನಿರ್ದೇಶನ ನೀಡಿದರು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಗಣಪತಿ ರಾಠೋಡ್, ಉಪಾಧ್ಯಕ್ಷೆ ಶಹೀದಾ ಬೇಗಂ, ಕಾರ್ಯನಿರ್ವಾಹಕ ಅಧಿಕಾರಿ ಫುಲೇಕರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT