ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನುಡಿಜಾತ್ರೆ ರಥಕ್ಕೆ ಭವ್ಯ ಸ್ವಾಗತ

Last Updated 6 ಜನವರಿ 2014, 5:59 IST
ಅಕ್ಷರ ಗಾತ್ರ

ಕುಶಾಲನಗರ: ಜ. 7, 8 ಮತ್ತು 9ರಂದು ಮಡಿಕೇರಿಯಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನುಡಿಜಾತ್ರೆ ಕುರಿತು ಜಾಗೃತಿ ಮೂಡಿಸಲು ಜಿಲ್ಲೆಯಾದ್ಯಂತ ಸಂಚರಿಸುತ್ತಿರುವ ರಥಕ್ಕೆ ಭಾನುವಾರ ಪಟ್ಟಣದಲ್ಲಿ ಭವ್ಯ ಸ್ವಾಗತ ಕೋರಲಾಯಿತು.

ಸಮೀಪದ ಕೂಡಿಗೆ ಕಡೆಯಿಂದ ಭಾನುವಾರ ಬೆಳಿಗ್ಗೆ ಪಟ್ಟಣಕ್ಕೆ ಆಗಮಿಸಿದ ರಥಕ್ಕೆ ಸರ್ಕಾರಿ ಸಮುದಾಯ ಆಸ್ಪತ್ರೆ ಬಳಿ ಪುಷ್ಪಾರ್ಚನೆ ಮಾಡಿ ಬರಮಾಡಿಕೊಳ್ಳಲಾಯಿತು. ಬಳಿಕ ಪಟ್ಟಣ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ವೃತ್ತದಲ್ಲಿ ಕೆಲವು ನಿಮಿಷಗಳ ಕಾಲ ಜನರಿಗೆ ಕರಪತ್ರಗಳನ್ನು ಹಂಚುವ ಮೂಲಕ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವಂತೆ ಆಹ್ವಾನಿಸಲಾಯಿತು.

ಪಟ್ಟಣ ಪಂಚಾಯಿತಿ ಅಧ್ಯಕ್ಷ ಡಿ.ಕೆ. ತಿಮ್ಮಪ್ಪ ಕನ್ನಡ ರಥಕ್ಕೆ ಪುಷ್ಪಮಾಲೆ ಹಾಕಿ ಸ್ವಾಗತಿಸಿದರು.
ಮೆರವಣಿಗೆ ಸಂಚಾಲಕ ಟಿ.ಜಿ. ಪ್ರೇಮಕುಮಾರ್, ಫಿಲಿಪ್ ವಾಸ್, ಸಾಹಿತ್ಯ ಪರಿಷತ್ತು ಕುಶಾಲನಗರ ಹೋಬಳಿ ಘಟಕದ ಪ್ರಮುಖರಾದ ಕೆ.ಎಸ್. ಮಹೇಶ್, ಮಂಜುನಾಥ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಪಾರ್ವತಿ, ಸದಸ್ಯರಾದ ಮಧು, ಸುರೇಯಾಬಾನು, ರಶ್ಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT