ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೂತನ ಟೆಲಿಮೆಡಿಸಿನ್ ವ್ಯವಸ್ಥೆ

Last Updated 8 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಯು ನಗರದ ರೆಫೆರಲ್ ಆಸ್ಪತ್ರೆಗಳು ಸೇರಿದಂತೆ ಬಿಬಿಎಂಪಿ ಆರೋಗ್ಯ ಕೇಂದ್ರಗಳಲ್ಲಿ ನೂತನ ಟೆಲಿಮೆಡಿಸಿನ್ ವ್ಯವಸ್ಥೆಯನ್ನು ಜಾರಿಗೆ ತರಲಿದೆ.

`ಪ್ರಜಾವಾಣಿ~ ಯೊಂದಿಗೆ ಮಾತನಾಡಿದ ಬಿಬಿಎಂಪಿಯ ಮುಖ್ಯ ಆರೋಗ್ಯಾಧಿಕಾರಿ ಡಾ. ದೇವಕಿ ಉಮೇಶ್, `ನಗರದ 17 ಆರೋಗ್ಯ ಕೇಂದ್ರಗಳಲ್ಲಿ ಈ ನೂತನ ತಂತ್ರಜ್ಞಾನವನ್ನು ಅಳವಡಿಸಲಾಗುವುದು. ಅತ್ಯಾಧುನಿಕ ತಂತ್ರಜ್ಞಾನಗಳಿಂದ ಈ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು. ಈ ಕೇಂದ್ರಗಳಗೆ ಕಿಯೋನಿಕ್ಸ್ ಸಂಸ್ಥೆಯು ತಾಂತ್ರಿಕ ನೆರವು ಒದಗಿಸಲಿದೆ~ ಎಂದರು.

`ಬನಶಂಕರಿಯ ರೆಫೆರಲ್ ಆಸ್ಪತ್ರೆಯಲ್ಲಿ ಈಗಾಗಲೇ ಈ ವ್ಯವಸ್ಥೆಯಿದ್ದು, ಸಿದ್ದಯ್ಯ ರಸ್ತೆಯ ದಾಸಪ್ಪ ಆಸ್ಪತ್ರೆಯಲ್ಲಿ ಈ ತಂತ್ರಜ್ಞಾನವನ್ನು ಅಳವಡಿಸಲಾಗುವುದು~ ಎಂದರು.`ನಗರದ ಎಲ್ಲ ಸರ್ಕಾರಿ ಆಸ್ಪತ್ರೆಗಳ ಸಹಯೋಗದೊಂದಿಗೆ ನೂತನ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲಾಗುವುದು.
 
ಆರೋಗ್ಯ ಕೇಂದ್ರಗಳಿಗೆ ಇಸಿಜಿ ಮತ್ತಿತರ ಅತ್ಯಾಧುನಿಕ ರೋಗ ಪತ್ತೆ ಯಂತ್ರಗಳು, ಆರೋಗ್ಯ ಸಲಕರಣೆಗಳನ್ನು ನೀಡಲಾಗುವುದು~ ಎಂದರು.`ಯಾವುದೇ ರೋಗಿ ಎದೆ ನೋವು ಎಂದು ಆರೋಗ್ಯ ಕೇಂದ್ರಗಳಿಗೆ ಬಂದರೆ, ಅಲ್ಲಿಂದ ಜಯದೇವ ಆಸ್ಪತ್ರೆಯ ಜತೆಗೆ ಟೆಲಿಮೆಡಿಸಿನ್ ಸಹಾಯದಿಂದ ಚಿಕಿತ್ಸೆಯ ಕುರಿತು ಮಾಹಿತಿ ಪಡೆದು ಚಿಕಿತ್ಸೆ ನೀಡಲು ಈ ವ್ಯವಸ್ಥೆಯಿಂದ ಸಾಧ್ಯವಾಗಲಿದೆ~ ಎಂದು ಮಾಹಿತಿ ನೀಡಿದರು.`ಮುಂದೆ ಇದನ್ನು  ಇನ್ನೂ ಹೆಚ್ಚು ಬಿಬಿಎಂಪಿ ಆಸ್ಪತ್ರೆಗಳಿಗೆ ವಿಸ್ತರಿಸುವ ಚಿಂತನೆ ಇದೆ~ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT