ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೂರಾರು ಮೀನುಗಾರರ ಬಂಧನ: ಶ್ರೀಲಂಕಾ ವಿರುದ್ಧ ಡಿಎಂಕೆ ಪ್ರತಿಭಟನೆ

Last Updated 16 ಫೆಬ್ರುವರಿ 2011, 11:35 IST
ಅಕ್ಷರ ಗಾತ್ರ

ಕೊಲಂಬೊ/ಚೆನ್ನೈ (ಪಿಟಿಐ): ನೂರಾರು ಭಾರತೀಯ ಮೀನುಗಾರರನ್ನು ಶ್ರೀಲಂಕಾ ಪಡೆಗಳು ಬಂಧಿಸಿದ್ದನ್ನು ಪ್ರತಿಭಟಿಸಿ ಆಡಳಿತಾರೂಢ ಡಿಎಂಕೆಯ ಹಲವಾರು ನಾಯಕರು ಮತ್ತು ಸಹಸ್ರಾರು ಕಾರ್ಯಕರ್ತರು ಬುಧವಾರ ಚೆನ್ನೈಯಲ್ಲಿನ ಶ್ರೀಲಂಕಾ ರಾಜತಾಂತ್ರಿಕ ಕಚೇರಿ ಬಳಿ ಪ್ರದರ್ಶನ ನಡೆಸಿದರು.

ಭಾರತೀಯ ಮೀನುಗಾರರ ಮೇಲೆ ಶ್ರೀಲಂಕೆಯಗಡಿಯೊಳಗೆ ನುಸುಳಿ ಕಾನೂನುಬಾಹಿರವಾಗಿ ಮೀನುಗಾರಿಕೆ ನಡೆಸುತ್ತಿದ್ದರು ಎಂದು ಆಪಾದಿಸಲಾಗಿದೆ.

ಶ್ರೀಲಂಕಾ ಸರ್ಕಾರದ ವಿರುದ್ಧ ನಾಮಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತಾ ರಾಯಭಾರ ಕಚೇರಿಯತ್ತ ಮುನ್ನುಗ್ಗುತ್ತಿದ್ದಾಗ ನಾಗೇಶ್ವರ ಪಾರ್ಕ್ ಬಳಿ ತಡೆದ ಪೊಲೀಸರು ಮುಖ್ಯಮಂತ್ರಿ ಕರುಣಾನಿಧಿ ಅವರ ಪುತ್ರಿ ಹಾಗೂ ರಾಜ್ಯಸಭಾ ಸದಸ್ಯೆ ಕನಿಮೋಳಿ ಸೇರಿದಂತೆ ಹಲವು ನಾಯಕರನ್ನು ಬಂಧಿಸಿದರು.

ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಶ್ರೀಲಂಕಾದ ವಿದೇಶಾಂಗ ಉಪಸಚಿವ ನಿಯೋಮಲ್ ಪಿರೇರಾ ಅವರು ಬಂಧಿಸಿರುವ 118 ಮಂದಿ ಮೀನುಗಾರರನ್ನು ಬುಧವಾರ ನ್ಯಾಯಾಲಯದಲ್ಲಿ ಹಾಜರುಪಡಿಸುವ ನಿರೀಕ್ಷೆ ಇದ್ದು, ಜಾಮೀನು ಸಿಗುವ ಸಂಭವವಿದೆ ಎಂದು ತಿಳಿಸಿದ್ದಾರೆ.

ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದ್ದು, ಶ್ರೀಲಂಕಾ ಜತೆ ಈ ವಿಷಯವನ್ನು ಪ್ರಸ್ತಾಪಿಸುವುದಾಗಿ ಪ್ರಧಾನಮಂತ್ರಿ ಮನಮೋಹನಸಿಂಗ್ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT