ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆಮ್ಮದಿಯ ಜೀವನಕ್ಕೆ ಮಾನವ ಹಕ್ಕು ಸಹಕಾರಿ

Last Updated 11 ಡಿಸೆಂಬರ್ 2013, 9:19 IST
ಅಕ್ಷರ ಗಾತ್ರ

ಹೊಸದುರ್ಗ: ಪ್ರತಿಯೊಬ್ಬ ವ್ಯಕ್ತಿ ನೆಮ್ಮದಿಯಾಗಿ ಜೀವಿಸಲು ಮಾನವ ಹಕ್ಕುಗಳು ಸಹಕಾರಿಯಾಗುತ್ತವೆ ಎಂದು ಪಟ್ಟಣದ ಜೆಎಂಎಫ್‌ ನ್ಯಾಯಾಲಯದ ಪ್ರಧಾನ ಸಿವಿಲ್‌ ನ್ಯಾಯಾಧೀಶ ಡಿ.ವೇಣುಗೋಪಾಲ್‌ ತಿಳಿಸಿದರು.

ಮಂಗಳವಾರ ಪಟ್ಟಣದ ಸಿವಿಲ್‌ ನ್ಯಾಯಾಲಯದ ಸಭಾಂಗಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ವತಿಯಿಂದ ಆಯೋಜಿಸಿದ್ದ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕೆಲವರು ವಿವಿಧ ಹಕ್ಕುಗಳಿಂದ ವಂಚಿತರಾಗಿ, ತಮ್ಮ ಆರೋಗ್ಯವನ್ನು ಹಾಳು ಮಾಡಿಕೊಂಡು ಬದುಕುತ್ತಿದ್ದಾರೆ. ಈ ಬಗ್ಗೆ ಸಂವಿಧಾನದ ಜವಾಬ್ದಾರಿಗಳನ್ನು ನಿಭಾಯಿಸುವವರು ಕಾಳಜಿ ವಹಿಸಬೇಕಿದೆ. ಹಕ್ಕುಗಳಿಗೆ ಚ್ಯುತಿ ತರುವಂತವರನ್ನು ಸರಿದಾರಿಗೆ ತರಬೇಕಾದರೆ ನ್ಯಾಯಾಲಯದ ವತಿಯಿಂದ ನಡೆಯುವ ವಿವಿಧ ಕಾನೂನು ಅರಿವು ಕಾರ್ಯಕ್ರಮಗಳ ಜ್ಞಾನ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಹಿರಿಯ ವಕೀಲ ಪಾಲನೇತ್ರಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶ ಮಹಾಂತೇಶ್‌ ಸಂಗಪ್ಪ ದರಗದ, ವಕೀಲರಾದ ಗುರುಬಸಪ್ಪ, ಷಡಾಕ್ಷರಪ್ಪ, ಬಸವರಾಜು, ಜಗದೀಶ್‌ನಾಯ್ಕ್‌, ರುಕ್ಮಿಣಿ, ಕೆ.ಮಲ್ಲಿಕಾರ್ಜುನಪ್ಪ, ಡಿ.ನಿರಂಜನ ಮೂರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT