ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇತಾಜಿ ವಿಚಾರಧಾರೆ ಪಠ್ಯದಲ್ಲಿ ಹೆಚ್ಚಲಿ

Last Updated 23 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಇಂಡಿಯನ್ ನ್ಯಾಷನಲ್ ಆರ್ಮಿ (ಐಎನ್‌ಎ) ಸಂಸ್ಥಾಪಕ, ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್‌ಚಂದ್ರ ಬೋಸ್ ಅವರು ಪ್ರತಿಪಾದಿಸಿದ ವಿಚಾರಗಳನ್ನು ಪ್ರಾಥಮಿಕ ಶಾಲೆಗಳ ಪಠ್ಯಕ್ರಮದಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಸೇರಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಡಿ.  ವಿ. ಸದಾನಂದ ಗೌಡ ಅಭಿಪ್ರಾಯಪಟ್ಟರು.

ನೇತಾಜಿ ಅವರ 115ನೇ ಜನ್ಮದಿನದ ಅಂಗವಾಗಿ ವಿಧಾನಸೌಧ ಆವರಣದಲ್ಲಿರುವ ಅವರ ಪ್ರತಿಮೆಗೆ ಸೋಮವಾರ ಮಾಲಾರ್ಪಣೆ ಮಾಡಿದ ನಂತರ ಅವರು ಸುದ್ದಿಗಾರರ ಜೊತೆ ಮಾತನಾಡಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಎಸ್.ವಿ. ರಂಗನಾಥ್, ಮುಖ್ಯಮಂತ್ರಿಗಳ ಸಚಿವಾಲಯದ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT