ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಮಕಾತಿ ಆದೇಶ ವಿಳಂಬ: ದೂರು

Last Updated 16 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಕೆಎಸ್‌ಆರ್‌ಪಿ ಮತ್ತು ಐಆರ್‌ಬಿ ಸಬ್‌ಇನ್‌ಸ್ಪೆಕ್ಟರ್‌ ಹುದ್ದೆ­ಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡದೆ ವಿಳಂಬ ಮಾಡಲಾಗುತ್ತಿದೆ ಎಂದು ಅಭ್ಯರ್ಥಿಗಳು ದೂರಿದ್ದಾರೆ.

ರಾಜ್ಯ ಸರ್ಕಾರ ಕೆಎಸ್‌ಆರ್‌ಪಿ ಮತ್ತು ಐಆರ್‌ಬಿಯ 103 ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ 2012ರ ಜನವರಿಯಲ್ಲಿ ಪ್ರಕಟಣೆ ಹೊರಡಿ­ಸಿತ್ತು. ಸಾವಿರಾರು ಆಕಾಂಕ್ಷಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದರು.

ನೇಮಕ ಪ್ರಕ್ರಿಯೆ ನಿಧಾನವಾಗಿ ನಡೆದು ಸೆಪ್ಟೆಂಬರ್‌ನಲ್ಲಿ ದೈಹಿಕ ಪರೀಕ್ಷೆ ನಡೆಯಿತು. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ನವೆಂಬರ್‌ 4ರಂದು ಲಿಖಿತ ಪರೀಕ್ಷೆ ನಡೆಸ­ಲಾಯಿತು. ನಂತರ 1:2ರ ಅನು­ಪಾತದ ಅನ್ವಯ 2013ರ ಜನವರಿ­ಯಲ್ಲಿ ಸಂದರ್ಶನ ನಡೆಸಿ ಜನವರಿ 10ರಂದು ಆಯ್ಕೆ ಪಟ್ಟಿ ಪ್ರಕಟಿಸ­ಲಾಯಿತು. ನಂತರ ಮಾರ್ಚ್‌ನಲ್ಲಿ ವೈದ್ಯಕೀಯ ಪರೀಕ್ಷೆ ನಡೆದು ಸಿಂಧುತ್ವ ಮತ್ತು ಅಗತ್ಯ ದಾಖಲಾತಿಗಳ ಪರಿಶೀಲನೆಯೂ ಮುಗಿದಿದೆ. ಆದರೂ, ನೇಮಕಾತಿ ಆದೇಶ ನೀಡದೆ ವಿಳಂಬ ನೀತಿ ಅನುಸರಿಸಲಾಗುತ್ತಿದೆ ಎಂದು ದೂರಿದ್ದಾರೆ.

ನೇಮಕಾತಿ ಕುರಿತು ಮುಖ್ಯ ಕಚೇರಿಯನ್ನು ಸಂಪರ್ಕಿಸಿದರೆ ದಿನ­ಕ್ಕೊಂದು ಮಾಹಿತಿ ನೀಡುತ್ತಿದ್ದಾರೆ ಹೊರತು ಆದೇಶ ನೀಡುತ್ತಿಲ್ಲ. ಅರ್ಜಿ ಸಲ್ಲಿಸಿ 20 ತಿಂಗಳು ಕಳೆದರೂ ನೇಮಕ ಪ್ರಕ್ರಿಯೆ ಮುಗಿದಿಲ್ಲ. ಆಯ್ಕೆಯಾದ ಅಭ್ಯರ್ಥಿಗಳು ಅತಂತ್ರ ಪರಿಸ್ಥಿತಿ ಎದುರಿಸುವಂತಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT