ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಮಕಾತಿ ಆದೇಶಕ್ಕೆ ಒತ್ತಾಯಿಸಿ ಉಪವಾಸ

Last Updated 10 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಪ್ರೌಢ ಶಾಲೆಗಳ ಮುಖ್ಯ ಶಿಕ್ಷಕರ ಹುದ್ದೆಗೆ ಆಯ್ಕೆಯಾಗಿರುವ 629 ಅಭ್ಯರ್ಥಿಗಳಿಗೆ ಶೀಘ್ರವೇ ನೇಮಕಾತಿ ಆದೇಶ ನೀಡುವಂತೆ ಒತ್ತಾಯಿಸಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಹೋರಾಟ ಸಮಿತಿ ಸದಸ್ಯರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರದಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

`ಮುಖ್ಯ ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡು ಒಂದೂವರೆ ವರ್ಷ ಕಳೆದಿದ್ದರೂ ಈವರೆಗೂ ನೇಮಕಾತಿ ಆದೇಶ ನೀಡಿಲ್ಲ. ಈ ಸಂಬಂಧ ಮುಖ್ಯಮಂತ್ರಿಗಳು, ಸಚಿವರು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಪತ್ರ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ~ ಎಂದು ಸಮಿತಿ ಅಧ್ಯಕ್ಷ ಜಿ.ವೆಂಕಟೇಶ್ ದೂರಿದರು.

`ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಸರ್ಕಾರ 2007ರಲ್ಲಿ ಆದೇಶ ಹೊರಡಿಸಿತ್ತು. ಕೆಪಿಎಸ್‌ಸಿ ಮೂಲಕ 2008ರಲ್ಲಿ ಲಿಖಿತ ಪರೀಕ್ಷೆ ಮತ್ತು 2010ರಲ್ಲಿ ಸಂದರ್ಶನ ಪ್ರಕ್ರಿಯೆ ಪೂರ್ಣಗೊಳಿಸಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಿಸಲಾಗಿತ್ತು. ಅಲ್ಲದೇ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವಂತೆ 2011ರ ಮಾರ್ಚ್‌ನಲ್ಲಿ ಗೆಜೆಟ್ ಹೊರಡಿಸಲಾಗಿತ್ತು~ ಎಂದರು.

ಸದ್ಯದಲ್ಲೇ ವಿಧಾನಪರಿಷತ್ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಸೇವಾನಿರತ ಶಿಕ್ಷಕರ ಮತಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಸರ್ಕಾರ ನೇಮಕಾತಿ ಆದೇಶ ನೀಡಲು ಹಿಂದೇಟು ಹಾಕುತ್ತಿದೆ ಎಂದು ಆರೋಪಿಸಿದರು.

ಅಕ್ಟೋಬರ್ ಅಂತ್ಯದೊಳಗೆ ನೇಮಕಾತಿ ಆದೇಶ ನೀಡಬೇಕು ಮತ್ತು ಸ್ಥಳ ಆಯ್ಕೆಗೆ ಸಂಬಂಧಿಸಿದಂತೆ ಕೌನ್ಸೆಲಿಂಗ್ ದಿನಾಂಕವನ್ನು ಪ್ರಕಟಿಸಬೇಕು. ಇಲ್ಲದಿದ್ದರೆ ಮುಖ್ಯಮಂತ್ರಿಗಳ ನಿವಾಸದ ಎದುರು ಪ್ರತಿಭಟನೆ ನಡೆಸಲಾಗುವುದು ಎಂದರು. ಸಾರ್ವಜನಿಕ ಶಿಕ್ಷಣ ಇಲಾಖೆ ಜಂಟಿ ಆಯುಕ್ತ ದೇವ್‌ಪ್ರಕಾಶ್ ಅವರು ಧರಣಿ ನಿರತರನ್ನು ಭೇಟಿ ಮಾಡಿ ಮನವಿ ಸ್ವೀಕರಿಸಿದರು. ಸಮಿತಿಯ ಕಾರ್ಯದರ್ಶಿ ಡಿ.ಸಿ.ವೇಣುಗೋಪಾಲ್, ಸದಸ್ಯರಾದ ಪ್ರಶಾಂತ್, ಅನಿಲ್ ಇತರರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT