ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಮಕಾತಿ ರದ್ದು: ಹೈಕೋರ್ಟ್‌ಗೆ ಸೀತಮ್ಮ

Last Updated 9 ಏಪ್ರಿಲ್ 2013, 19:52 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವ (ಆಡಳಿತ) ಸ್ಥಾನದಿಂದ ತಮ್ಮನ್ನು ತೆರವುಗೊಳಿಸಿ ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಕೆ. ಸೀತಮ್ಮ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ವಿ. ಶೈಲೇಂದ್ರ ಕುಮಾರ್, `ಸೀತಮ್ಮ ಅವರು ಈವರೆಗೂ ಹುದ್ದೆ ತೆರವು ಮಾಡಿರದಿದ್ದರೆ, ಏ. 16ರವರೆಗೂ ಅದೇ ಸ್ಥಾನದಲ್ಲಿ ಮುಂದುವರಿಯಬೇಕು' ಎಂದು ಆದೇಶಿಸಿದರು.

ಪ್ರೊ.ಬಿ.ಸಿ. ಮೈಲಾರಪ್ಪ ಅವರನ್ನು ಕುಲಸಚಿವ ಸ್ಥಾನಕ್ಕೆ ನೇಮಕ ಮಾಡಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಅನೂರ್ಜಿತಗೊಳಿಸಿತು. ಇದನ್ನು ಪ್ರಶ್ನಿಸಿ ಮೈಲಾರಪ್ಪ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದರು. ಮೈಲಾರಪ್ಪ ಅವರಿಂದ ತೆರವಾದ ಸ್ಥಾನಕ್ಕೆ ಸೀತಮ್ಮ ಅವರನ್ನು ತಾತ್ಕಾಲಿಕವಾಗಿ ನೇಮಕ ಮಾಡಿ ಸರ್ಕಾರ ಆದೇಶಿಸಿತ್ತು.

ಸೀತಮ್ಮ ಅವರ ನೇಮಕವನ್ನು ರದ್ದು ಮಾಡಿ ಸರ್ಕಾರ ಇತ್ತೀಚೆಗೆ ಆದೇಶಿಸಿತ್ತು. ಇದನ್ನು ಸೀತಮ್ಮ ಪ್ರಶ್ನಿಸಿದ್ದಾರೆ. ಅರ್ಜಿಯ ವಿಚಾರಣೆಯನ್ನು ಇದೇ 16ಕ್ಕೆ ಮುಂದೂಡಲಾಗಿದೆ. ರಾಜ್ಯ ಸರ್ಕಾರ ಮತ್ತು ಬೆಂಗಳೂರು ವಿಶ್ವವಿದ್ಯಾಲಯಕ್ಕೆ ನೋಟಿಸ್ ಜಾರಿಗೆ ಆದೇಶಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT