ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೈನಾ `ಫಿಕ್ಕಿ' ಅಧ್ಯಕ್ಷೆ

Last Updated 15 ಡಿಸೆಂಬರ್ 2012, 19:54 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): `ಎಚ್‌ಎಸ್‌ಬಿಸಿ' ಇಂಡಿಯಾದ ದೇಶೀಯ ಮುಖ್ಯಸ್ಥೆ ನೈನಾ ಲಾಲ್ ಕಿದ್ವಾಯಿ (55)  ಶನಿವಾರ ಇಲ್ಲಿ ಭಾರತೀಯ ವಾಣಿಜ್ಯೋದ್ಯಮ ಮಹಾಸಂಘಗಳ ಒಕ್ಕೂಟದ (ಫಿಕ್ಕಿ) ನೂತನ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಿದರು.

`ಫಿಕ್ಕಿ'ಯ ಮೊದಲ ಮಹಿಳಾ ಅಧ್ಯಕ್ಷೆ ಎನ್ನುವ ಗೌರವವೂ ನೈನಾ ಅವರಿಗೆ ಲಭಿಸಿದೆ. ಆರ್. ವಿ ಕನೊರಿಯಾ ನಿವೃತ್ತಿಯಿಂದ ತೆರವಾದ ಸ್ಥಾನವನ್ನು ಅವರು ತುಂಬಲಿದ್ದಾರೆ.

ಹಾರ್ವಡ್ ವಿಶ್ವವಿದ್ಯಾಲಯದಿಂದ `ಎಂಬಿಎ' ಪದವಿ ಪಡೆದಿರುವ ನೈನಾ, ಫಾರ್ಚೂನ್ ನಿಯತಕಾಲಿಕದ ಪ್ರಭಾವಿ ಮಹಿಳಾ ಉದ್ಯಮಿಗಳ ಪಟ್ಟಿಯಲ್ಲೂ ಸ್ಥಾನ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT