ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೌಕರರಿಗೆ 2,490 ವಸತಿ ಗೃಹಗಳು

Last Updated 5 ಡಿಸೆಂಬರ್ 2012, 19:39 IST
ಅಕ್ಷರ ಗಾತ್ರ

ಸುವರ್ಣ ವಿಧಾನಸೌಧ:  `ಬೆಂಗಳೂರು ನಗರದಲ್ಲಿ ಸರ್ಕಾರಿ ನೌಕರರಿಗಾಗಿ ಲೋಕೋಪಯೋಗಿ ಇಲಾಖೆ  2,490 ವಸತಿ ಗೃಹಗಳನ್ನು ನಿರ್ಮಿಸಿದ್ದು, ಇಲಾಖೆಗೆ 5,408 ನೌಕರರು ಬೇಡಿಕೆ ಸಲ್ಲಿಸಿದ್ದಾರೆ' ಎಂದು ಇಲಾಖೆ ಸಚಿವ ಸಿ.ಎಂ. ಉದಾಸಿ ತಿಳಿಸಿದರು.

ಕಾಂಗ್ರೆಸ್‌ನ ಕೆ.ಗೋವಿಂದರಾಜು ಪ್ರಶ್ನೆಗೆ ಅವರು ಉತ್ತರಿಸಿದರು. ವಸತಿ ಗೃಹಗಳು ಖಾಲಿಯಾದ ತಕ್ಷಣವೇ ಜೇಷ್ಠತೆ ಅನುಸಾರ ನೌಕರರಿಗೆ ಹಂಚಿಕೆ ಮಾಡಲಾಗುತ್ತದೆ ಎಂದು ಹೇಳಿದರು. ಹೊಸ ವಸತಿ ಗೃಹ ನಿರ್ಮಾಣ ಮಾಡಲು ರೂ 189 ಕೋಟಿ ಯೋಜನೆ ಕೈಗೆತ್ತಿಕೊಳ್ಳಲಾಗಿದೆ ಎಂದ ಅವರು, 20 ಕೋಟಿ ಮೊತ್ತದ ಕಾಮಗಾರಿಗೆ ಆಗಲೇ ಟೆಂಡರ್ ಕರೆಯಲಾಗಿದೆ ಎಂದು ಮಾಹಿತಿ ನೀಡಿದರು.

ಜೀವನ್‌ಭೀಮಾನಗರದ ವಸತಿ ಗೃಹಗಳಲ್ಲಿ ನೀರಿನ ಸಮಸ್ಯೆ ತೀವ್ರವಾಗಿದ್ದು, ಪರಿಹಾರಕ್ಕೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಗೋವಿಂದರಾಜು ಅವರು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT