ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾ. ಚಂದ್ರಶೇಖರಯ್ಯ ನೇಮಕ ಅನೂರ್ಜಿತ: ಸುಪ್ರೀಂ

Last Updated 11 ಜನವರಿ 2013, 8:18 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ):  ಎರಡನೇ ಉಪ ಲೋಕಾಯುಕ್ತರಾಗಿ ನಿವೃತ್ತ ನ್ಯಾಯಮೂರ್ತಿ ಚಂದ್ರಶೇಖರಯ್ಯ ಅವರ ನೇಮಕವನ್ನು ಅನೂರ್ಜಿತ ಗೊಳಿಸಿದ್ದ ಹೈಕೋರ್ಟ್ ತೀರ್ಪು ಅನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಎತ್ತಿಹಿಡಿದಿದೆ.

ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಚಂದ್ರಶೇಖರಯ್ಯ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ವಿಭಾಗೀಯ ಪೀಠದ ನ್ಯಾಯಮೂರ್ತಿಗಳಾದ ಕೆ.ಎಸ್ ರಾಧಾಕೃಷ್ಣ ಮತ್ತು ಮದನ್ ಬಿ ಲಾಕುರ್ ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪನ್ನು ಸಮರ್ಥಿಸಿದರು.

ಎರಡನೇ ಉಪ ಲೋಕಾಯುಕ್ತರನ್ನು ನೇಮಕ ಮಾಡುವಾಗ ಮುಖ್ಯಮಂತ್ರಿಯವರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳೊಂದಿಗೆ ಚರ್ಚಿಸಿಲ್ಲ ಮತ್ತು ನೇಮಕಾತಿಯ ಸಂವಿಧಾನಬದ್ಧ ವಿದಿ ವಿಧಾನಗಳನ್ನು ಪೂರೈಸಿಲ್ಲ ಎಂದು ಸುಪ್ರೀಂ ಕೋರ್ಟ್ ಪೀಠ ತೀರ್ಪಿನಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT